ಶುಕ್ರವಾರ, ಡಿಸೆಂಬರ್ 4, 2020
22 °C

ಭತ್ತ ಕಟಾವು: ಖಾಸಗಿ ಯಂತ್ರಗಳಿಗೆ ದರ ನಿಗದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಖಾಸಗಿ ಭತ್ತ ಕಟಾವು ಯಂತ್ರಗಳಿಗೆ ಪ್ರತಿ ಗಂಟೆಗೆ ₹1,900 ಬಾಡಿಗೆ ನಿಗದಿ ಪಡಿಸಿ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಆದೇಶಿಸಿದ್ದಾರೆ.

ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಭತ್ತ ಬೆಳೆದ ರೈತರಿಗೆ ಹೆಚ್ಚಿನ ಅರ್ಥಿಕ ಹೊರೆಯಾಗಲಿರುವ ನಿಟ್ಟಿನಲ್ಲಿ ಖಾಸಗಿಯಾಗಿ ಭತ್ತ ಕಟಾವು ಮಾಡುವ ಯಂತ್ರಗಳಿಗೆ ಪ್ರತಿ ಗಂಟೆಗೆ ₹1,900 ನಿಗದಿ ಪಡಿಸಲಾಗಿದೆ. ಎಲ್ಲಾ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ಇದನ್ನು ತಪ್ಪದೇ ಪಾಲಿಸಬೇಕು. ತಪ್ಪಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು