ಭಾನುವಾರ, ಏಪ್ರಿಲ್ 2, 2023
32 °C

ಸುರಪುರ: ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ: ರಾಜಾ ಹನುಮಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸುರಪುರ: ‘ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಕ್ರೀಡಾ ಸ್ಪೂರ್ತಿಯಿಂದ ಆಟದಲ್ಲಿ ಭಾಗವಹಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ ಹೇಳಿದರು.

ತಾಲೂಕಿನ ರುಕ್ಮಾಪುರ ಗ್ರಾಮದ ಮಹರ್ಷಿ ವಾಲ್ಮೀಕಿ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಗುರುವಾರ ಏರ್ಪಡಿಸಿದ್ದ ಗ್ರಾಮೀಣ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಡಿವೈಎಸ್ಪಿ ಡಾ. ಟಿ. ಮಂಜುನಾಥ ಮಾತನಾಡಿದರು.

ತಾ.ಪಂ ಇಒ ಚಂದ್ರಶೇಖರ ಪವ್ಹಾರ ಅಧ್ಯಕ್ಷತೆ ವಹಿಸಿದ್ದರು. ಟಿಎಚ್‌ಒ ಡಾ. ರಾಜಾ ವೆಂಕಪ್ಪನಾಯಕ, ಬಿಇಒ ಮಹೇಶ ಪೂಜಾರ, ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಂಜೀವಪ್ಪ ದರಬಾರಿ, ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಮಲ್ಲಪ್ಪ, ಪಿಡಿಒ ಸಂಗೀತಾ ಸಜ್ಜನ್, ಮುಖಂಡರಾದ ಶಂಕರನಾಯಕ, ಜಯರಾಮ ನಾಯಕ, ಭೀಮಣ್ಣ ಬೇವಿನಾಳ, ಶರಣು ನಾಯಕ, ರಾಜಾ ರಂಗಪ್ಪನಾಯಕ, ಈಶ್ವರ ನಾಯಕ, ಮಂಜು ನಾಯಕ, ದೈಹಿಕ ಶಿಕ್ಷಣ ಶಿಕ್ಷಕರಾದ ಲಕ್ಷ್ಮಣ ಬಿರಾದಾರ, ಶರಣಗೌಡ, ನಿಂಗಪ್ಪ ಪೂಜಾರಿ, ಮರೆಪ್ಪ ಗೋಂದಳೆ, ಮಾನಪ್ಪ ಇತರರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು