ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಂದಾಯ ಇಲಾಖೆ ನೌಕರರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Published 6 ಜನವರಿ 2024, 15:56 IST
Last Updated 6 ಜನವರಿ 2024, 15:56 IST
ಅಕ್ಷರ ಗಾತ್ರ

ಯಾದಗಿರಿ: ‘ಪ್ರತಿಯೊಬ್ಬರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿ ಕ್ರೀಡಾ ಸ್ಫೂರ್ತಿ ಮೆರೆಯಬೇಕು’ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಜಿಲ್ಲಾ ಕಂದಾಯ ಇಲಾಖೆ ನೌಕರರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಕಂದಾಯ ಇಲಾಖೆ ಸಿಬ್ಬಂದಿ ತಮ್ಮ ಕರ್ತವ್ಯದ ಜೊತೆಗೆ ಕ್ರೀಡೆಯಲ್ಲಿ ಎಲ್ಲರೂ ಭಾಗವಹಿಸಿದ್ದಾರೆ. ಕ್ರೀಡೆಯಲ್ಲಿ ಸ್ಪರ್ಧಾ ಮನೋಭಾವ ಮುಖ್ಯ. ಸೋಲು–ಗೆಲುವು ಸಾಮಾನ್ಯ. ಆದರೆ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ಹೇಳಿದರು.

ಕ್ರೀಡಾ ಮನೋಭಾವದಿಂದ ಆಟಗಳಲ್ಲಿ ಪಾಲ್ಗೊಳ್ಳಬೇಕು. ಅಲ್ಲದೇ ಕ್ರೀಡೆ ಕೇವಲ ಮನೋರಂಜನೆಗೆ ಮಾತ್ರವಲ್ಲ. ದೈಹಿಕ ಮತ್ತು ಮಾನಸಿಕವಾಗಿ ನಮ್ಮನ್ನು ಸದೃಢರನ್ನಾಗಿ ಮಾಡುತ್ತದೆ ಎಂದರು.

ಕ್ರೀಡೆಯಿಂದ ಸೌಹಾರ್ದ ಮತ್ತು ಸ್ಪರ್ಧಾತ್ಮಕತೆ ಬರುತ್ತದೆ. ನೌಕರರು ಸಕ್ರಿಯವಾಗಿ ಭಾಗವಹಿಸುವುದರಿಂದ ಸಂತೋಷ ಕಾಣಲು ಸಾಧ್ಯ. ಎರಡು ದಿನಗಳ ಕಾಲ ನಡೆಯುವ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸುವ ಮೂಲಕ ಕ್ರೀಡೆಗೆ ಮೆರಗು ತರಬೇಕು ಎಂದು ತಿಳಿಸಿದರು.

ಕ್ರೀಡೆಯಲ್ಲಿ ಭಾಗವಹಿಸಿದ ಸಿಬ್ಬಂದಿ: ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾದ ಕ್ರೀಡಾಕೂಟದಲ್ಲಿ ಕಂದಾಯ ಇಲಾಖೆ ಸಿಬ್ಬಂದಿ ಸಂಭ್ರಮದಿಂದ ಭಾಗವಹಿಸಿದ್ದರು. ವಾಲಿಬಾಲ್‌, ರನ್ನಿಂಗ್‌, ಕೇರಂ, ಕ್ರಿಕೆಟ್‌ನಲ್ಲಿ ಸಿಬ್ಬಂದಿ ತಂಡವಾಗಿ ಪಾಲ್ಗೊಂಡರು.

ಇದಕ್ಕೂ ಮುನ್ನ ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್‌ ಪ್ರತಿಜ್ಞಾ ವಿಧಿ ಬೋಧಿಸಿದರು.

ಈ ವೇಳೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ, ಯಾದಗಿರಿ ತಹಶೀಲ್ದಾರ್ ಸುರೇಶ ಅಂಕಲಗಿ, ಸುರಪುರ ತಹಶೀಲ್ದಾರ್‌ ವಿಜಯಕುಮಾರ, ಹುಣಸಗಿ ತಹಶೀಲ್ದಾರ್‌ ಬಸಲಿಂಗಪ್ಪ ನಾಯ್ಕೋಡಿ, ವಡಗೇರಾ ತಹಶೀಲ್ದಾರ್‌ ಶ್ರೀನಿವಾಸ ಚಾಪೇಲ್‌, ಗುರುಮಠಕಲ್‌ ತಹಶೀಲ್ದಾರ್‌ ನೀಲಪ್ರಭಾ ಸೇರಿದಂತೆ ನೌಕರರ ಸಂಘದ ಅಧ್ಯಕ್ಷ ಶಬ್ಬೀರ್‌ ಪಟೇಲ್‌, ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸೋಗಿ ಉಪಸ್ಥಿತರಿದ್ದರು.

ಕಂದಾಯ ಇಲಾಖೆ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಕ್ರೀಡಾಜ್ಯೋತಿ ಸ್ವೀಕರಿಸಿದರು
ಕಂದಾಯ ಇಲಾಖೆ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಕ್ರೀಡಾಜ್ಯೋತಿ ಸ್ವೀಕರಿಸಿದರು
ಕಂದಾಯ ಇಲಾಖೆ ನೌಕರರ ಕ್ರೀಡಾಕೂಟದಲ್ಲಿ ವಾಲಿಬಾಲ್‌ ಟೂರ್ನಿ ನಡೆಯಿತು
ಕಂದಾಯ ಇಲಾಖೆ ನೌಕರರ ಕ್ರೀಡಾಕೂಟದಲ್ಲಿ ವಾಲಿಬಾಲ್‌ ಟೂರ್ನಿ ನಡೆಯಿತು
ಕಂದಾಯ ಇಲಾಖೆ ನೌಕರರ ಕ್ರೀಡಾಕೂಟದಲ್ಲಿ ನೌಕರರು ರನ್ನಿಂಗ್‌ ಸ್ಲರ್ಧೆಯಲ್ಲಿ ಭಾಗವಹಿಸಿದರು
ಕಂದಾಯ ಇಲಾಖೆ ನೌಕರರ ಕ್ರೀಡಾಕೂಟದಲ್ಲಿ ನೌಕರರು ರನ್ನಿಂಗ್‌ ಸ್ಲರ್ಧೆಯಲ್ಲಿ ಭಾಗವಹಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT