ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ವೇತನ ಕೂಡಲೇ ಪಾವತಿಸುವಂತೆ ಆಗ್ರಹ

Last Updated 9 ಜೂನ್ 2020, 15:49 IST
ಅಕ್ಷರ ಗಾತ್ರ

ಯಾದಗಿರಿ: ಹೊರಗುತ್ತಿಗೆ ಕಾರ್ಮಿಕರಿಗೆ ಲಾಕ್‍ಡೌನ್ ಅವಧಿಯ ಸಂಪೂರ್ಣ ವೇತನ ಬಿಡುಗಡೆ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯಲ್ಲಿ ಬಾಕಿ ಇರುವ ಹಲವು ತಿಂಗಳ ವೇತನವನ್ನು ಈ ಕೂಡಲೇ ಪಾವತಿಸಬೇಕು ಎಂದು ಆಗ್ರಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಸತಿನಿಲಯ ಕಾರ್ಮಿಕರ ಸಂಘ (ಎಐಯುಟಿಯುಸಿ ಸಂಯೋಜಿತ) ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ಕ್ವಾರೈಂಟೇನ್ ಕೇಂದ್ರಗಳಾಗಿ ಪರಿವರ್ತಿತ ಹಾಸ್ಟೆಲ್ / ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ ಹೊರಗುತ್ತಿಗೆ ಸಿಬ್ಬಂದಿಗೆ ವಿಶೇಷ ಭತ್ಯೆ ನೀಡಬೇಕು. ನೇರ ನೇಮಕಾತಿಯಿಂದ ತೊಂದರೆಗೊಳಗಾದ ಗುತ್ತಿಗೆ ಕಾರ್ಮಿಕರನ್ನು ಸೇವಾ ಹಿರಿತನಕ್ಕನುಗುಣವಾಗಿ ಇತರೆ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಮನವಿ ಪತ್ರ ಸ್ವಿಕರಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ ರಜಪೂತ, ‘ಈ ಕುರಿತು ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು, ಒಂದು ವಾರದೊಳಗೆ ಬಾಕಿ ವೇತನ ಬಿಡುಗಡೆಗೆ ಕ್ರಮವಹಿಸಲಾಗುವುದು’ ಎಂದು ಭರವಸೆ ನೀಡಿದರು.

ಈ ವೇಳೆ ಸಂಘದ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ಮುಖಂಡರಾದ ರಾಮಲಿಂಗಪ್ಪ ಬಿ.ಎನ್, ಶರಣಪ್ಪ ಯಡ್ಡಳ್ಳಿ, ಸಿದ್ದಪ್ಪ, ಗಜಾನನ, ಭೀಮಾಶಂಕರ, ಶ್ರೀಕಾಂತ, ಭಾಗಪ್ಪ, ಹನುಮಂತ, ಮರಳಮ್ಮ, ಶ್ರೀದೇವಿ, ಲಕ್ಷ್ಮಿ, ಪದ್ಮಾ, ನಾಗಮ್ಮ, ಅಂಬಮ್ಮ, ಮಾಳಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT