ಭಾನುವಾರ, ಆಗಸ್ಟ್ 1, 2021
23 °C
ನಿಯಮಬಾಹಿರವಾಗಿ ಹಣ ವೆಚ್ಚ ಮಾಡಿದ ಆರೋಪ

ಬಂದಳ್ಳಿ ಪಿಡಿಒ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ತಾಲ್ಲೂಕಿನ ಬಂದಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಿರಿಮಲ್ಲಣ್ಣ ಅವರು ನಿಯ ಮಬಾಹಿರವಾಗಿ ₹ 27 ಲಕ್ಷ ವೆಚ್ಚ ಮಾಡಿ ರುವ ಆರೋಪದಡಿ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾಶರ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕಳೆದ ವರ್ಷ ಅಧ್ಯಕ್ಷೆ ಅನು ರಾಧ ವೀರಭದ್ರಪ್ಪ ಯಡ್ಡಳ್ಳಿ ಅಧಿಕಾರಾ ವಧಿಯಲ್ಲಿ ಪಂಚಾಯಿತಿಯ 14ನೇ ಹಣಕಾಸು ಯೋಜನೆಯ ಅನುದಾನ ಮತ್ತು ಕರ ವಸೂಲಾತಿಯಲ್ಲಿ ಜಮಾ ವಾದ ₹ 27,22,909 ಹಣವನ್ನು ನಿಯಮ ಬಾಹಿರವಾಗಿ ವೆಚ್ಚ ಮಾಡಲಾ ಗಿದೆ ಎಂದು ಗ್ರಾ.ಪಂ. ಮಾಜಿ ಅಧ್ಯಕ್ಷೆ ದೇವಿಬಾಯಿ ಪರಶುರಾಮ ಚಬಾಣ್‌ ದೂರಿದ್ದರು. ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ನೀಡಿದ್ದ ಕಾರಣ ಅಧಿಕಾರಿಗಳ ತಂಡ ಪರಿಶೀಲನೆ ಮಾಡಿ ಜಿಲ್ಲಾಪಂಚಾಯಿತಿಗೆ ಸಲ್ಲಿಸಿದ ವರದಿಯಲ್ಲಿ ಪಿಡಿಒ ಲೋಪವೆ ಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅವರ ವಿರುದ್ಧ ಇಲಾಖೆ ವಿಚಾರಣೆ ಬಾಕಿ ಇರಿಸಿ, ಸೇವೆಯಿಂದ ಅಮಾನತುಗೊಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.