ಗುರುಮಠಕಲ್ (ಯಾದಗಿರಿ ಜಿಲ್ಲೆ): ತಾಲ್ಲೂಕಿನ ಕಾಕಲವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದೂರು ಗ್ರಾಮದಲ್ಲಿ ಭಾನುವಾರ (ಜುಲೈ 21) ರಾತ್ರಿ ಮೂರು ಜನರಲ್ಲಿ ವಾಂತಿ-ಭೇದಿಯ ಸಮಸ್ಯೆ ಕಾಣಿಸಿಕೊಂಡಿದ್ದು, ಸೋಮವಾರ (ಜುಲೈ 22) ಬೆಳಿಗ್ಗೆ ಮತ್ತೆ ಮೂವರಿಗೆ ವಕ್ಕರಿಸಿದ್ದು, ಒಟ್ಟು ಆರು ಜನರು ವಾಂತಿ-ಭೇದಿಗೆ ಅಸ್ವಸ್ಥರಾಗಿದ್ದಾರೆ.

ಗ್ರಾಮಕ್ಕೆ ನೀರು ಸರಬರಾಜು ಮಾಡುವ ಮುಖ್ಯ ಪೈಪ್ಲೈನ್ ಹಾಗೂ ಗ್ರಾಮದ ಅಲ್ಲಲ್ಲಿ ಪೈಪ್ಲೈನ್ನಲ್ಲೂ ಸೋರಿಕೆಯಿತ್ತು. ಪೈಪ್ಲೈನ್ನಲ್ಲಿ ಕಲುಷಿತ ನೀರು ಮಿಶ್ರಣಗೊಂಡಿದ್ದು, ನೀರನ್ನು ಕುಡಿದಿದ್ದೇ ಸಮಸ್ಯೆಗೆ ಕಾರಣವಿರಬಹುದು ಎಂದು ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದರು.

ಒಬ್ಬರು ಗುಣಮುಖರಾಗಿ ಹಿಂದಿರುಗಿದ್ದು, ಗುರುಮಠಕಲ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಒಬ್ಬರು, ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ಯಾದಗಿರಿ ನಗರದ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ತಲಾ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ತೆರಳಿದ್ದ ಟಿಎಚ್ಒ ಡಾ.ಹಣಮಂತರೆಡ್ಡಿ ಅವರು, ಪರಿಸ್ಥಿತಿಯ ಕುರಿತು ಪರಿಶೀಲಿಸಿ, ಜಲ ಮೂಲಗಳಿಂದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದಾರೆ. ಜತೆಗೆ ಗ್ರಾಮದಲ್ಲಿ ತುರ್ತು ಚಿಕಿತ್ಸಾ ಘಟಕವನ್ನು ಆರಂಭಿಸಲಾಗಿದೆ.

'ಬೋರ್ 1, ಸಿಂಗಲ್ ಫೇಸ್ 3, ಕೈಪಂಪ್ 1, ಒಂದು ತೆರೆದ ಬಾವಿಗಳಿದ್ದು, ಕ್ಲೋರಿನೇಶನ್ ಕೆಲಸ ಮಾಡಲಾಗಿದೆ. ಪ್ರತಿ ಶನಿವಾರ ಕ್ಲೋರಿನೇಶನ್ ಮಾಡುತ್ತಿದ್ದೇವೆ ಮತ್ತು ಜುಲೈ 14 ರಂದು ಗ್ರಾಮದ ಎಲ್ಲಾ ಜಲ ಮೂಲಗಳ ನೀರಿನ ಮಾದರಿ ಪರೀಕ್ಷೆ ಮಾಡಿಸಿದಾಗ ಕುಡಿಯಲು ಯೋಗ್ಯವಾಗಿದ್ದವು' ಎಂದು ಪಿಡಿಒ ಭೀಮರಾಯ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.