ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ‘ನದಿ ಪಾತ್ರದ ಜನರು ಎಚ್ಚರಿಕೆ ವಹಿಸಿ’

Last Updated 12 ಸೆಪ್ಟೆಂಬರ್ 2022, 4:47 IST
ಅಕ್ಷರ ಗಾತ್ರ

ಯಾದಗಿರಿ: ನದಿ ಪಾತ್ರದ ಗ್ರಾಮಗಳ ಜನರು ಮುಂಜಾಗ್ರತೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸೂಚನೆ ನೀಡಿದ್ದಾರೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 12ರ ವರೆಗೆ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಹೀಗಾಗಿ ಭೀಮಾ ನದಿಯ ತೀರದ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರು ನದಿಯ ಕಡೆಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ನದಿಯ ತೀರಕ್ಕೆ ಬಿಡದಂತೆ ಮುನ್ನೆಚ್ಚರಿಕೆ ವಹಿಸಲು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ತೆರೆಯಲಾದಜಿಲ್ಲಾ ವಿಪತ್ತು ನಿರ್ವಾಹಣಾ ಸಹಾಯವಾಣಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿದ್ದು, ಸಹಾಯವಾಣಿ 08473-253800 ಈ ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT