ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಿಷಯುಕ್ತ ತ್ಯಾಜ್ಯ: ಕಾರ್ಖಾನೆ ವಿರುದ್ಧ ಕ್ರಮ’

ಕೈಗಾರಿಕೆ ಅಭಿವೃದ್ಧಿಯಾದರೆ ಜಿಲ್ಲೆಯೂ ಅಭಿವೃದ್ಧಿ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ
Last Updated 6 ಆಗಸ್ಟ್ 2021, 4:29 IST
ಅಕ್ಷರ ಗಾತ್ರ

ಯಾದಗಿರಿ: ವಿಷಯುಕ್ತ ತ್ಯಾಜ್ಯವನ್ನು ಹಳ್ಳ- ಕೊಳ್ಳಗಳಿಗೆ ಹರಿಬಿಡುವ ರಾಸಾಯನಿಕ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಕಡೇಚೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿ ಕುರಿತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

’ಮಾಲಿನ್ಯಕಾರಕ ತ್ಯಾಜ್ಯವನ್ನು ಕಾರ್ಖಾನೆಗಳ ಬೇಜವಾಬ್ದಾರಿಯಿಂದ ಹೊರಗೆ ಹರಿ ಬಿಡುತ್ತಿರುವುದಕ್ಕೆ ಕೈಗಾರಿಕಾ ಪ್ರದೇಶದ ಸುತ್ತಲಿನ ಜನತೆ ತೀವ್ರ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಕೈಗಾರಿಕಾ ಪ್ರದೇಶದಿಂದ ಹಳ್ಳ - ಕೊಳ್ಳಗಳಿಗೆ ಹರಿದ ಕಲುಷಿತ ರಾಸಾಯನಿಕ ದ್ರವವನ್ನು ಜಲಚರ, ಪಶು-ಪಕ್ಷಿಗಳು ಸೇವಿಸಿ ನಾಶವಾಗುತ್ತಿವೆ. ಮಾಲಿನ್ಯ ಎಸಗುತ್ತಿರುವ ಟೈರ್ ಘಟಕ ವಿರುದ್ಧ ಕೂಡಲೇ ಕಾನೂನು ಪ್ರಕಾರ ಕ್ರಮ ತೆಗೆದುಕೊಂಡು ಘಟಕವನ್ನು ಸ್ಥಗಿತಗೊಳಿಸಬೇಕು’ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕಾ ಸ್ಥಾಪನೆಗೆ ನಿವೇಶನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಇಲ್ಲಿಯವರೆಗೆ 173 ಅರ್ಜಿಗಳು ಬಂದಿವೆ. ಮೀಸ ಲಾತಿ ಅನ್ವಯ ಶೇ 22.5 ರಷ್ಟು ಕಲ್ಪಿಸಬೇಕಾ ಗಿದೆ. ಸುಮಾರು 700 ಎಕರೆ ಭೂಮಿ ಹಂಚಿಕೆಗೆ ಲಭ್ಯವಿದೆ. ಅದರಲ್ಲಿ ಪರಿಶಿಷ್ಟ ಜಾತಿ/ ಪಂಗಡದವರಿಗೆ 161 ಎಕರೆ ಹಂಚುವ ಮೀಸಲಾತಿ ಇದೆ. ಇಲ್ಲಿಯವರೆಗೆ 11 ಎಕರೆ ಹಂಚಿಕೆ ಮಾಡಲಾಗಿದೆ. ನಮಗೆ ಬಂದಿರುವ ಅರ್ಜಿಗಳನ್ನು ವಿಲೇವಾರಿ ಮಾಡಿ ಅರ್ಹರಿಗೆ ಹಂಚಿ ಮಾಡಬೇಕಾಗಿದೆ ಎಂದು ಕೈಗಾರಿಕಾ ಅಧಿಕಾರಿಗಳು ಜಿ ಲ್ಲಾಧಿಕಾರಿ ಗಮನಕ್ಕೆ ತಂದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಇನ್ನೂ ಒಂದು ವಾರದೊಳಗೆ ಬಂದಿರುವ ಅರ್ಜಿಗಳಲ್ಲಿ ಅರ್ಹ ಫಲಾನುಭವಿಗಳ ಆಯ್ಕೆ ಮಾಡಿ ಎಂದು ಉಪವಿಭಾಗಾಧಿಕಾರಿಗೆ ಸೂಚಿಸಿದರು.

ಕೈಗಾರಿಕಾ ಅಭಿವೃದ್ಧಿಯಾದರೆ ಜಿಲ್ಲೆಯೂ ಅಭಿವೃದ್ಧಿಯಾಗುತ್ತದೆ. ಕೈಗಾರಿಕಾ ಪ್ರದೇಶದ ನಿವೇಶನ ಸೌಲಭ್ಯವು ಅರ್ಹರಿಗೆ ಉಪಯೋಗವಾಗಬೇಕು. ನಿವೇಶನ ಪಡೆದ ನಂತರ ಕೈಗಾರಿಕೆಗಳು ಸಮರ್ಪಕವಾಗಿ ಬಳಕೆಯಾಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಅಧಿಕಾರಿಗಳು ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಉಪವಿಭಾಧಿಕಾರಿ ಪ್ರಶಾಂತ ಹನಗಂಡಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪ ನಿರ್ದೇಶಕಿ ರೇಖಾ ಮ್ಯಾಗೇರಿ, ಯಾದಗಿರಿ ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT