ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ಪೊಲೀಸ್ ನೇಮಕಾತಿ ಪರೀಕ್ಷೆ: 667 ಅಭ್ಯರ್ಥಿಗಳು ಗೈರು

Published 10 ಸೆಪ್ಟೆಂಬರ್ 2023, 15:41 IST
Last Updated 10 ಸೆಪ್ಟೆಂಬರ್ 2023, 15:41 IST
ಅಕ್ಷರ ಗಾತ್ರ

ಯಾದಗಿರಿ: ನಗರದ 6 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆ ಭಾನುವಾರ ನಡೆಯಿತು.

2,424 ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 1,757 ಹಾಜರಾಗಿ 667 ಅಭ್ಯರ್ಥಿಗಳು ಗೈರಾಗಿದ್ದರು.

ಬಾಲಕ, ಬಾಲಕಿಯರ ಪದವಿ ಪೂರ್ವ ಕಾಲೇಜು, ಡಾನ್‌ ಬಾಸ್ಕೋ, ಜವಾಹರ ಪದವಿ ಪೂರ್ವ ಕಾಲೇಜು, ನ್ಯೂ ಕನ್ನಡ, ಸಭಾ ಪದವಿ ಪೂರ್ವ ಕಾಲೇಜು ಕಾಲೇಜುಗಳಲ್ಲಿ ಪರೀಕ್ಷೆ ನಡೆಯಿತು.

ಬೇರೆ ಬೇರೆ ಜಿಲ್ಲೆಗಳಿಂದ ಪರೀಕ್ಷಾರ್ಥಿಗಳು ಆಗಮಿಸಿದ್ದರು. ಬ್ಯಾಗ್‌ಗಳನ್ನು ಆವರಣದ ಗೋಡೆ ಬಳಿಯೇ ಇರಿಸಲಾಗಿತ್ತು.

ಭದ್ರತೆ ನೇಮಿಸಿದ್ದ ಸಿಬ್ಬಂದಿ ಮೂರು ಹಂತಗಳಲ್ಲಿ ಅಭ್ಯರ್ಥಿಗಳನ್ನು ತಪಾಸಣೆ ನಡೆಸಿದರು. ಪ್ರವೇಶ ಪತ್ರ, ಪೆನ್‌ ಹೊರತು ಪಡಿಸಿ ಬೇರೆ ವಸ್ತುಗಳನ್ನು ನಿಷೇಧಿಸಲಾಗಿತ್ತು. ತಪಾಸಣೆ ಜಾಗದಲ್ಲಿ ಶಾಮಿಯಾನ ವ್ಯವಸ್ಥೆ ಮಾಡಲಾಗಿತ್ತು.

ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರ ವರೆಗೆ ಲಿಖಿತ ಪರೀಕ್ಷೆ ನಡೆಯಿತು. ಬೆಳಿಗ್ಗೆ 8.30ಕ್ಕೆ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಹಾಜರಿದ್ದರು. ಪೊಲೀಸ್ ಇಲಾಖೆ ಪರೀಕ್ಷಾರ್ಥಿಗಳನ್ನು ಮುಖ್ಯದ್ವಾರ ಬಳಿ ಎಲ್ಲಾ ರೀತಿಯ ತಪಾಸಣೆ ನಡೆಸಿದ ನಂತರ ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು.

ಬ್ಲೂಟೂತ್, ಮೊಬೈಲ್‌, ಕ್ಯಾಲ್ಕುಲೇಟರ್‌ಗೂ ಅವಕಾಶ ಇರಲಿಲ್ಲ. ಪರೀಕ್ಷೆಗೆ ಜಿಲ್ಲಾ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿತ್ತು.

ಯಾದಗಿರಿ ನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಗಳ ತಪಾಸಣೆ ನಡೆಯಿತು
ಯಾದಗಿರಿ ನಗರದ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಪೊಲೀಸ್ ನೇಮಕಾತಿ ಪರೀಕ್ಷೆಗೆ ಬಂದಿದ್ದ ಅಭ್ಯರ್ಥಿಗಳ ತಪಾಸಣೆ ನಡೆಯಿತು
ಯಾದಗಿರಿ ನಗರದ ನ್ಯೂ ಕನ್ನಡ ಪದವಿ ಪೂರ್ವ ಕಾಲೇಜಿನ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಸಂಗೀತಾ ಭೇಟಿ ನೀಡಿದರು
ಯಾದಗಿರಿ ನಗರದ ನ್ಯೂ ಕನ್ನಡ ಪದವಿ ಪೂರ್ವ ಕಾಲೇಜಿನ ಪೊಲೀಸ್ ನೇಮಕಾತಿ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಸಂಗೀತಾ ಭೇಟಿ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT