ಯಾದಗಿರಿ: ಜಿಲ್ಲೆಯಲ್ಲಿ ಜನವರಿ 19ರಿಂದ 22ರವರೆಗೆ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ 1,62,255 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಕಾರ್ಯಕ್ರಮ ಯಶಸ್ವಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಅಂಗವಾಗಿ ಗುರುವಾರ ನಡೆದ ಜಿಲ್ಲಾ ಮಟ್ಟದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜನವರಿ 19ರಂದು ಭಾನುವಾರ ಜಿಲ್ಲೆಯಲ್ಲಿ ಸ್ಥಾಪಿಸುವ 648 ಬೂತ್ಗಳಲ್ಲಿ ಪೋಲಿಯೊ ಲಸಿಕೆ ಹಾಕಬೇಕು. ಒಂದು ಬೂತ್ಗೆ ಇಬ್ಬರಂತೆ ಲಸಿಕೆ ನೀಡುವ ಕಾರ್ಯಕರ್ತರನ್ನು ನಿಯೋಜಿಸಬೇಕು. ಭಾನುವಾರ ಲಸಿಕೆಯಿಂದ ತಪ್ಪಿಸಿಕೊಂಡ ಮಕ್ಕಳಿಗೆ ಜನವರಿ 20ರಿಂದ 22ರವರೆಗೆ ಅಂಗನವಾಡಿ ಕಾರ್ಯಕರ್ತರು, ಶುಶ್ರೂಷಕರು ಮನೆಮನೆಗೆ ಭೇಟಿ ನೀಡಿ, ಪೋಲಿಯೊ ಹನಿ ಹಾಕುವಂತೆ ನಿರ್ದೇಶಿಸಿದರು.

ಜಿಲ್ಲೆಯ ಗ್ರಾಮೀಣ ಪ್ರದೇಶದ ಮಹಿಳೆಯರು ಹೆಚ್ಚಾಗಿ ಕೃಷಿ ಮತ್ತು ಇನ್ನಿತರ ಕೂಲಿ ಕೆಲಸಗಳಿಗಾಗಿ ತೆರಳುತ್ತಾರೆ. ಹತ್ತಿ ಬಿಡಿಸುವುದು, ಕಳೆ ಕೀಳುವುದು, ರಾಶಿ, ಇಟ್ಟಂಗಿ ಭಟ್ಟಿ, ಕಟ್ಟಡ ನಿರ್ಮಾಣ ಕೆಲಸಗಳಿಗೆ ಹೋಗುವಾಗ ಪೋಷಕರು ತಮ್ಮ ಜತೆಗೆ ಮಕ್ಕಳನ್ನು ಕೂಡ ಕರೆದುಕೊಂಡು ಹೋಗಿರುತ್ತಾರೆ. ಇಂತಹ ಕಾರ್ಮಿಕ ವರ್ಗದ ಮಕ್ಕಳ ಬಗ್ಗೆ ಹೆಚ್ಚಿನ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಯಶಸ್ವಿಗೆ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಪೋಲಿಯೊ ಲಸಿಕೆ ಹಾಕುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಈ ನಿಟ್ಟಿನಲ್ಲಿ ಜನವರಿ 18 ಮತ್ತು 19ರಂದು ಶಾಲಾ ಮಕ್ಕಳು, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಗ್ರಾಮಗಳಲ್ಲಿ ಪ್ರಭಾತ ಪೇರಿ ನಡೆಸಬೇಕು. ಅಲ್ಲದೇ, ಗ್ರಾಮಗಳಲ್ಲಿ ಡಂಗೂರ ಸಾರುವಂತೆ ಸೂಚಿಸಿದರು.

ಲಸಿಕೆ ನೀಡುವ ಸಂದರ್ಭದಲ್ಲಿ ಬಳಸುವ ಐಸ್ಪ್ಯಾಕ್ ತಯಾರಿಕೆಗೆ ವಿದ್ಯುತ್ ಅಗತ್ಯವಾಗಿರುತ್ತದೆ. ಕಾರಣ ಜಿಲ್ಲೆಯ 41 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ 10 ದಿನಗಳ ಕಾಲ ನಿರಂತರ 3 ಫೇಸ್ ವಿದ್ಯುತ್ ಸರಬರಾಜು ಮಾಡಬೇಕು ಎಂದು ಜೆಸ್ಕಾಂ ಎಂಜಿನಿಯರ್ಗಳಿಗೆ ತಿಳಿಸಿದರು.

ವಿಶ್ವ ಆರೋಗ್ಯ ಸಂಸ್ಥೆಯ ಕಲಬುರ್ಗಿವಿಭಾಗ ಮಟ್ಟದ ವೈದ್ಯಕೀಯ ಸರ್ವೇಕ್ಷಣಾಧಿಕಾರಿ ಡಾ.ಅನಿಲ್ಕುಮಾರ್ ಎಸ್.ತಾಳಿಕೋಟಿ ಕಾರ್ಯಕ್ರಮದ ಪೂರ್ವಸಿದ್ಧತೆಗಳ ಬಗ್ಗೆ ವಿವರಣೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ,ಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ, ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಜಿಲ್ಲಾ ನೋಡಲ್ ಅಧಿಕಾರಿ ಡಾ.ಭಗವಂತ ಅನವಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರಭಾಕರ ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳಿಂದ ಇದ್ದರು.

ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಪ್ರತಿಯೊಂದು ಮಗುವಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ಹಾಕಬೇಕು. 0-5 ವರ್ಷದೊಳಗಿನ ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು.

–ಎಂ.ಕೂರ್ಮಾರಾವ್,ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.