ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಸಚಿವ ಚವಾಣ್

Last Updated 17 ಸೆಪ್ಟೆಂಬರ್ 2022, 4:18 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಪಶುಸಂಗೋಪನೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ರಾಷ್ಟ್ರ ಧ್ವಜಾರೋಹಣ ನೆರೆವೇರಿಸಿದರು.

ಧ್ವಜಾರೋಹಣ ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.

ಈ ವೇಳೆ ಮಾತನಾಡಿದ ಅವರು,ಕಲ್ಯಾಣ ಕರ್ನಾಟಕ ನಾಮಾಂತಿಕವಾದ ಹೈದರಾಬಾದ್ ಕರ್ನಾಟಕ ಪ್ರದೇಶ ತನ್ನದೇ ಆದ ಭವ್ಯ ಚರಿತ್ರೆಯನ್ನು ಹೊಂದಿದೆ. ಇಂದು ಅಖಂಡ ಕರ್ನಾಟಕದ ಅವಿಭಾಜ್ಯ ಭಾಗ. ಹೀಗಾಗಿ 75ನೇ ಕಲ್ಯಾಣ ಕರ್ನಾಟಕ ಉತ್ಸವ ಸಂಭ್ರಮಾಚರಣೆ ಮಾಡುತ್ತಿದ್ದೇವೆ ಎಂದರು.

ಪ್ರಗತಿ ವಿರೋಧಿಯಾದ ನಿಜಾಮ ಉಸ್ಮಾನ್ ಅಲಿಖಾನ್ ಆಡಳಿತದಲ್ಲಿ ಪ್ರಜೆಗಳಿಗೆ ಯಾವುದೇ ಅವಕಾಶ ನೀಡಿರಲಿಲ್ಲ. ಅದರಲ್ಲೂ ಹೈದರಾಬಾದ್ ಕರ್ನಾಟಕ ಭಾಗ ಶಿಕ್ಷಣ, ಆರೋಗ್ಯ, ಆರ್ಥಿಕವಾಗಿ ತೀರಾ ನಿರ್ಲಕ್ಷಿಸಲ್ಪಟ್ಟು ಅತ್ಯಂತ ಹಿಂದುಳಿದ ಪ್ರದೇಶವಾಗಿ ರೂಪುಗೊಳ್ಳಲು ಕಾರಣವಾಯಿತು ಎಂದರು.

ಅತ್ಯಂತ ಹಿಂದುಳಿದ ಹೈದರಾಬಾದ್ ಕರ್ನಾಟಕವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ರಚಿಸಲಾಯಿತು. ಅದನ್ನು ಈಗ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ನಾಮಕರಣ ಮಾಡಿದ್ದು, ಅನೇಕ ಅನುದಾನದ ಮೂಲಕ ಮೂಲಸೌರ್ಯಕ್ಕೆ ಒತ್ತು ನೀಡಲಾಗುತ್ತಿದೆ ಎಂದರು.

ಈ ವೇಳೆ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಕರ್ನಾಟಕ ಅಲೆಮಾರಿ ಅರೆಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ದೇವೇಂದ್ರನಾಥ ಕೆ.ನಾದ್, ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಆರ್. ನಾಯ್ಕ್, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರುದ್ರಗೌಡ ಪಾಟೀಲ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT