‘ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ’

7

‘ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ’

Published:
Updated:
Deccan Herald

ಕೆಂಭಾವಿ: ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ವಿಶೇಷ ಪ್ರತಿಭೆ ಇರುತ್ತದೆ. ಅದನ್ನು ಹೊರಹಾಕಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಬಿ.ಆರ್.ಪಿ ಹಣಮಂತ ಪೂಜಾರಿ ಹೇಳಿದರು.

ಪಟ್ಟಣದ ಸ್ಪಂದನ ಆಂಗ್ಲ ಮಾಧ್ಯಮ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕ್ಲಷ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ಭಾಗವಹಿಸಬೇಕು. ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಪೋಷಕರು, ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಬೇಕು  ಎಂದು ಹೇಳಿದರು.

ಸಿಆರ್‍ಪಿ ಬಸನಗೌಡ ಮಾತನಾಡಿದರು. ಸ್ಪಂದನ ಶಾಲೆಯ ಕಾರ್ಯದರ್ಶಿ ಡಿ.ಸಿ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಪುರಸಭೆ ಅಧ್ಯಕ್ಷ ದೇವಪ್ಪ ಮ್ಯಾಗೇರಿ ಕಾರ್ಯಕ್ರಮ ಉದ್ಘಾಟಿಸಿದರು. ಪುರಸಭೆ ಸದಸ್ಯ ವಿಕಾಸ ಸೊನ್ನದ್, ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪವನ ಕುಲಕರ್ಣಿ, ರವಿ ಸೊನ್ನದ, ಶ್ರೀಶೈಲ ಪಾಸೋಡಿ, ತಿಪ್ಪಣ್ಣ ರಾಠೋಡ, ಬಸವರಾಜ ಆವಟಿ, ವೀರಣ್ಣ ಕಲಕೇರಿ, ರವಿರಾಜ ಇದ್ದರು.

ಕೆಂಭಾವಿ ಕ್ಲಷ್ಟರ್‌ ಸುಮಾರು 30 ಶಾಲೆಗಳ ಮಕ್ಕಳು ಭಾಗವಹಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !