ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಚ್ಚುಕಟ್ಟಾಗಿ ಮಾನವ ಸರಪಳಿ ನಿರ್ಮಿಸೋಣ: ಶರಣಬಸಪ್ಪ ದರ್ಶನಾಪುರ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಭಾವಿ ಸಭೆ
Published : 9 ಸೆಪ್ಟೆಂಬರ್ 2024, 15:20 IST
Last Updated : 9 ಸೆಪ್ಟೆಂಬರ್ 2024, 15:20 IST
ಫಾಲೋ ಮಾಡಿ
Comments

ಯಾದಗಿರಿ: ‘ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿಯನ್ನು ಅಚ್ಚುಕಟ್ಟಾಗಿ ರಚಿಸುವ ಮೂಲಕ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸೋಣ’ ಎಂದು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ, ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಸಲಹೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಸೆ.15ರಂದು ಯರಗೋಳ ಗ್ರಾಮದಿಂದ ಗೂಗಲ್ ಬ್ರಿಡ್ಜ್‌ವರೆಗಿನ ಗ್ರಾಮಗಳ ವಿದ್ಯಾರ್ಥಿಗಳು, ಗ್ರಾಮಸ್ಥರು, ಸ್ವಸಹಾಯ ಸಂಘಗಳು, ಅಧಿಕಾರಿ, ಸಿಬ್ಬಂದಿ ಮಾನವ ಸರಪಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ತಾ.ಪಂ. ಇಒ, ತಹಶೀಲ್ದಾರ್, ಪಿಡಿಒ ಸೇರಿದಂತೆ ಸಂಬಂಧಿತ ಅಧಿಕಾರಿಗಳು ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಸೂಚಿಸಿದರು.

‘ಕಾರ್ಯಕ್ರಮವು ಬೆಳಿಗ್ಗೆ ವೇಳೆಯಾದ್ದರಿಂದ ವಾಹನದಟ್ಟಣೆ ಕುರಿತು ಸೂಕ್ತ ಕ್ರಮವಹಿಸಿ, ಸಮಾಜ ಕಲ್ಯಾಣ, ಪೊಲೀಸ್ ಸೇರಿದಂತೆ ಸಂಬಂಧಿತ ಎಲ್ಲ ಇಲಾಖೆಗಳು ಸಮನ್ವಯತೆ ಸಾಧಿಸಿ, ಕಾರ್ಯಕ್ರಮದಲ್ಲಿ ಯಾವ ಲೋಪವೂ ಜರುಗದಂತೆ ಅವಶ್ಯಕ ತಯಾರಿ ಮತ್ತು ಮುಂಜಾಗ್ರತೆ ವಹಿಸಬೇಕು’ ಎಂದರು.

ಜಿಲ್ಲಾಧಿಕಾರಿ ಸುಶೀಲಾ ಬಿ.ಮಾತನಾಡಿ, ‘ಸರ್ಕಾರದ ನಿರ್ದೇಶನದಂತೆ ಬೀದರ್ ಜಿಲ್ಲೆಯಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ಹಮ್ಮಿಕೊಳ್ಳಲಾಗಿದೆ. ಅದರಂತೆ ನಮ್ಮಲ್ಲೂ ವಿವಿಧ ಥೀಮ್‌ಗಳ ಮಾನವ ಸರಪಳಿ ನಿರ್ಮಿಸುವುದು. ಜಿಲ್ಲಾಡಳಿತ ಭವನ, ವಡಗೇರಾ ತಾಲ್ಲೂಕು ಕೇಂದ್ರದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ಜರುಗಲಿದೆ. 60 ಕಿ.ಮೀ ವ್ಯಾಪ್ತಿಯ ಮಾನವ ಸರಪಳಿಯಲ್ಲಿ ಸುಮಾರು 46 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಲವೀಶ್ ಒರಡಿಯಾ, ಎಸ್ಪಿ ಜಿ.ಸಂಗೀತ, ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ, ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT