ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ತಾಲ್ಲೂಕು ಕಸಾಪ ಅಧ್ಯಕ್ಷರ ಪದಗ್ರಹಣ

Last Updated 13 ಮಾರ್ಚ್ 2022, 15:35 IST
ಅಕ್ಷರ ಗಾತ್ರ

ಯಾದಗಿರಿ:ಕನ್ನಡ ಭಾಷೆ ಸಂರಕ್ಷಣೆಗೆ ಹುಟ್ಟಿಕೊಂಡ ಪರಿಷತ್ತು ತನ್ನ ಕಾರ್ಯಚಟುವಟಿಕೆಯ ಮೂಲಕ ಕನ್ನಡ ನಾಡು ನುಡಿಯ ಬೆಳವಣಿಗೆಗೆ ಶ್ರಮಿಸುತ್ತಿದೆಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಕನ್ನಡ ಸಾಹಿತ್ಯ ತಾಲ್ಲೂಕು ಅಧ್ಯಕ್ಷರ ಸೇವಾ ಸ್ವೀಕಾರ ಮತ್ತು ಕಾರ್ಯ ಚಟುವಟಿಕೆಗಳ ಉದ್ಘಾಟನೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ನಾಡು ನುಡಿಯ ಬೆಳವಣಿಗೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಸಾಧನೆ ಅಗಾಧವಾದದ್ದು. ಗಿರಿ ನಾಡಿನಲ್ಲಿ ಸಾಹಿತ್ಯಿಕ ಚಟುವಟಿಕೆಗಳು ಉತ್ತಮವಾಗಿ ನಡೆಯಲಿ. ವೆಂಕಟೇಶ ಕಲಕಂಬ ಸಾಹಿತಿ,‌ ಶಿಕ್ಷಕರು ಆಗಿರುವ ಅವರ ನೇತೃತ್ವದಲ್ಲಿ ಹಿರಿಯ ಸಾಹಿತಿಗಳ, ಚಿಂತಕರ, ಕನ್ನಡ ಅಭಿಮಾನಿಗಳ ಸಹಕಾರದೊಂದಿಗೆ ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನಗಳು ತಾಲ್ಲೂಕಿನಲ್ಲಿ ನಡೆಯಲಿ ಎಂದು ಆಶಿಸಿದರು.

ವಿಶ್ವಕರ್ಮ ಏಕದಂಡಗಿ ಮಠದ ಶ್ರೀನಿವಾಸ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಕನ್ನಡ ಸಾಹಿತ್ಯ ಚರಿತ್ರೆ ಬಹಳ ಅಮೋಘವಾದದ್ದು, ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆ ನಮ್ಮದಾಗಿದೆ. ಈ ಭೂಮಿ ಶರಣರು ನಾಡು ಆಧ್ಯಾತ್ಮಿಕ ಬೀಡು. ಇಲ್ಲಿಯೇ ವಚನ ಸಾಹಿತ್ಯ, ದಾಸ ಸಾಹಿತ್ಯ, ತತ್ವಪದ, ಜನಪದ ಎಲ್ಲಾ ಕ್ಷೇತ್ರದಲ್ಲಿ ತಾಲ್ಲೂಕು ಕಸಾಪ ಉತ್ತಮ ಕೆಲಸ ಮಾಡಲಿ ಎಂದು ಹಾರೈಸಿದರು.

ನಿಕಟಪೂರ್ವ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಭೀಮರಾಯ ಲಿಂಗೇರಿ ಮಾತನಾಡಿ, ಸಾಹಿತ್ಯ ಚಟುವಟಿಕೆಗಳು ನಿರಂತರವಾಗಿ ನಡೆಯಲಿ. ನಮ್ಮ ಭಾಗದಲ್ಲಿ ಸಾಹಿತ್ಯಕ್ಕೇ ಏನೂ ಕಮ್ಮಿ ಇಲ್ಲ. ನಮ್ಮ ಅವಧಿಯಲ್ಲಿ ಎಲ್ಲರೂ ಸಹಕಾರ ನೀಡಿದ್ದೀರಿ.‌ಅದರಂತೆ ಮುಂದೆಯೂ ತಾಲ್ಲೂಕು ಅಧ್ಯಕ್ಷರಿಗೆ ಸಹಕಾರ ನೀಡಿ ಎಂದರು.

ನೂತನ ಕಸಾಪ್ಪ ಅಧ್ಯಕ್ಷ ವೆಂಕಟೇಶ್ ಕಲಕಂಬ ಅವರಿಗೆ ಪರಿಷತ್ತಿನ ಧ್ವಜ ಹಸ್ತಾಂತರ ಮಾಡಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ವೆಂಕಟೇಶ್ ಕಲಕಂಭ ಮುಂದಿನ ದಿನಗಳಲ್ಲಿ ಕನ್ನಡ ಮನಸ್ಸುಗಳು ನನಗೆ ಮಾರ್ಗದರ್ಶನ, ಸಲಹೆ ನೀಡಬೇಕು. ನಿಮ್ಮೆಲ್ಲರ ಸಹಕಾರ, ಪ್ರೀತಿ ವಿಶ್ವಾಸದೊಂದಿಗೆ ಮುನ್ನಡೆಯುತ್ತೇನೆ. ಐದು ವರ್ಷದ ಅವಧಿಯಲ್ಲಿ ಉತ್ತಮ ಕಾರ್ಯಕ್ರಮಗಳನ್ನು ಸಂಘಟಿಸಲು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಅಧ್ಯಕ್ಷತೆ ವಹಿಸಿ ಸಾಹಿತ್ಯ ಸಮ್ಮೇಳನಗಳಿಗೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಹೇಳಿದರು.

ಡಾ. ಸುಭಾಶ್ಚಂದ್ರ ಕೌಲಗಿ ಪ್ರಾಸ್ತಾವಿಕ ಮಾತನಾಡಿದರು. ಸಾಹಿತಿ ಅಯ್ಯಣ್ಣ ಹುಂಡೇಕಾರ, ಮಹಾದೇವಪ್ಪ ತುಮಕೂರ, ಬಸವಂತರಾಯ ಮಾಲಿಪಾಟೀಲ, ಬಸವರಾಜ ಮೋಟ್ನಳ್ಳಿ ಡಾ.ಸಿದ್ದರಾಜ ರೆಡ್ಡಿ, ಸಿ.ಎಂ. ಪಟ್ಟೇದಾರ್, ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ್ ಸಿರಿವಾರ, ವೀರಭದ್ರಯ್ಯಸ್ವಾಮಿ, ಸೋಮಶೇಖರ್ ಮಣ್ಣೂರ, ಬಂಡಪ್ಪ ಆಕಳ, ವಿಶ್ವನಾಥ್ ಪತ್ತಾರ್, ಅಶೋಕ ಚಂಡ್ರಿಕಿ, ಮಹೇಶ್ ಹಿರೇಮಠ. ಮಲ್ಲಿಕಾರ್ಜುನ ವಿಶ್ವಕರ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT