ಭಾನುವಾರ, ಸೆಪ್ಟೆಂಬರ್ 20, 2020
23 °C
ಆಪರೇಷನ್‌ ಕಮಲದ ಆಡಿಯೊ ಪ್ರಕರಣ: ಕಾನೂನು ಹೋರಾಟ ಮುಂದುವರಿಕೆ

ಬಿಎಸ್‌ವೈ ವಿರುದ್ಧದ ಪ್ರಕರಣ ಮುಂದುವರಿಕೆಗೆ ಬಿಜೆಪಿ ನಾಯಕರಿಂದಲೇ ಒತ್ತಡ: ಶರಣಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ‘ಆಪರೇಷನ್ ಕಮಲಕ್ಕಾಗಿ ಬಿ.ಎಸ್‌.ಯಡಿಯೂರಪ್ಪ ಅವರು ನನಗೆ ಹಣದ ಆಮಿಷವೊಡ್ಡಿದ ಪ್ರಕರಣ ಮುಂದುವರಿಸುವಂತೆ ಬಿಜೆಪಿಯ ಅಗ್ರಗಣ್ಯ ನಾಯಕರೊಬ್ಬರು ಹೇಳಿದ್ದಾರೆ. ನನ್ನ ಜೊತೆ ಫೋನ್‌ನಲ್ಲಿ ಸಂಭಾಷಣೆ ನಡೆಸಿರುವ ಈ ನಾಯಕರು, ಯಡಿಯೂರಪ್ಪಗೆ ಖೆಡ್ಡಾ ತೋಡುತ್ತಿದ್ದಾರೆ’ ಎಂದು ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ ಅವರ ಪುತ್ರ, ಜೆಡಿಎಸ್ ರಾಜ್ಯ ಯುವ ಘಟಕದ ಮಹಾಪ್ರಧಾನ ಕಾರ್ಯದರ್ಶಿ ಶರಣಗೌಡ ಕಂದಕೂರ ಹೇಳಿದರು.

ಹೈದರಾಬಾದ್‌ ಕರ್ನಾಟಕ ಪ್ರದೇಶದ ಅಭಿವೃದ್ಧಿ ಮಂಡಳಿಯ ಮುಖ್ಯಮಂತ್ರಿ ವಿವೇಚನಾ ನಿಧಿಯಿಂದ ಕ್ಷೇತ್ರಕ್ಕೆ ಹಂಚಿಕೆ ಮಾಡಿದ್ದ ಅನುದಾನವನ್ನು ಯಡಿಯೂರಪ್ಪ ವಾಪಸ್‌ ಪಡೆದಿದ್ದಕ್ಕೆ ಗುರುಮಠಕಲ್‌ನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ‌ಮಾತನಾಡಿದ ಅವರು, ‘ನನ್ನ ಮುಖಾಂತರ ಬಿಜೆಪಿಯವರು ಯಡಿಯೂರಪ್ಪರಿಗೆ ಖೆಡ್ಡಾ ತೋಡಿದ್ದಾರೆ. ಇನ್ನೆರಡು ದಿನದಲ್ಲಿ ನಮ್ಮ ನಾಯಕರನ್ನು ಭೇಟಿಯಾಗಿ ಆ ಪ್ರಕರಣದ ಬಗ್ಗೆ ಚರ್ಚಿಸುವೆ. ಯಡಿಯೂರಪ್ಪ ಅವರಿಗೆ ಒಂದು ಗತಿ ಕಾಣಿಸುವೆ’ ಎಂದರು.

‘ಯಡಿಯೂರಪ್ಪ ಹತಾಶರಾಗಿದ್ದು, ಅವರ ಅಧಿಕಾರ ಅವಧಿ ಐದಾರು ತಿಂಗಳು ಮಾತ್ರ’ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು