ಸುರಪುರ: ‘ನೂತನ ಸಚಿವ ಸಂಪುಟದಲ್ಲಿ ಪ್ರಿಯಾಂಕ್ ಖರ್ಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ಮತ್ತು ಶಾಸಕ ರಾಜಾ ವೇಣುಗೋಪಾಲ ನಾಯಕ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ದಲಿತ ಸಾಮೂಹಿಕ ಸಂಘಟನೆಗಳ ಒಕ್ಕೂಟದ ಮುಖಂಡರು ಆಗ್ರಹಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ‘ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಏಳಿಗೆಗಾಗಿ ಅವಿರತವಾಗಿ ಶ್ರಮಿಸುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಕೊಡುಗೆ ಅಪಾರವಾಗಿದೆ. ಹೀಗಾಗಿ ಅವರ ಪುತ್ರ ಹಾಗೂ ಸಮರ್ಥ ನಾಯಕರಾದ ಪ್ರಿಯಾಂಕ್ ಖರ್ಗೆ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಉನ್ನತ ಮಟ್ಟದ ಸಚಿವ ಖಾತೆಯನ್ನು ನೀಡಬೇಕು’ ಎಂದು ಹೇಳಿದರು.

‘ಸುರಪುರ ಕ್ಷೇತ್ರದ ಶಾಸಕರಾಗಿದ್ದ ರಾಜಾ ವೆಂಕಟಪ್ಪ ನಾಯಕ ಅವರ ಅಕಾಲಿಕ ನಿಧನ ಕ್ಷೇತ್ರದ ಜನರಿಗೆ ತೀವ್ರ ನೋವುಂಟು ಮಾಡಿತು. ಅವರ ನಿಧನದ ನಂತರ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಶಾಸಕರಾಗಿ ಆಯ್ಕೆಯಾದರು. ಅವರು ಕೂಡಾ ತಂದೆ ಹಾಕಿಕೊಟ್ಟ ಮಾರ್ಗದರ್ಶನದಲ್ಲೆ ಕ್ಷೇತ್ರದ ಅಭಿವೃದ್ಧಿ ಹಾಗೂ ರೈತಾಪಿ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗ ಮತ್ತು ದೀನ ದಲಿತರ ಸೇವೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಅವರಿಗೆ ಸಚಿವ ಸ್ಥಾನ ನೀಡಿ ಗೌರವಿಸಬೇಕು’ ಎಂದು ಕಾಂಗ್ರೆಸ್ ವರಿಷ್ಠರಿಗೆ ಮನವಿ ಮಾಡಿದರು.

ಕ.ದ.ಸಂಸ (ಮಾನವತವಾದ) ರಾಜ್ಯ ಸಂಚಾಲಕ ಭೀಮರಾಯ ಸಿಂದಗೇರಿ, ಕದಸಂಸ (ಪ್ರೊ.ಬಿ.ಕೃಷ್ಣಪ್ಪ ಸ್ವಾಭಿಮಾನಿ) ಜಿಲ್ಲಾ ಸಂಚಾಲಕ ಶ್ರೀನಿವಾಸ ನಾಯಕ ಬೊಮ್ಮನಳ್ಳಿ, ಮಲ್ಲು ಬಿಲ್ಲವ್, ಧರ್ಮರಾಜ ಬಡಿಗೇರ್ ಮಾತನಾಡಿದರು. ಮಹ್ಮದ್ ಮೌಲಾಲಿ ಸೌದಾಗರ್, ಹಣಮಂತ ಹೊಸಮನಿ, ಖಾಜಾ ಖಲೀಲ್ ಅಹ್ಮದ್ ಅರಕೇರಿ, ರಾಜು ದೊಡ್ಡಮನಿ, ಪರಶುರಾಮ ದೊಡ್ಡಮನಿ, ಲಿಯಾಖತ್ ವರ್ತಿ, ವಿಶ್ವನಾಥ ಹೊಸಮನಿ, ಮಲ್ಲು, ಮರೆಪ್ಪ ಕುಂಬಾರಪೇಟೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-30-2008840594

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.