ಗುರುವಾರ , ಫೆಬ್ರವರಿ 20, 2020
22 °C

ಆರೋಗ್ಯ ಯೋಜನೆಗಳ ಪ್ರಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯಲ್ಲಿ ಎಲ್.ಇ.ಡಿ ಮೊಬೈಲ್ ವಾಹನಗಳ ಮೂಲಕ ಆರೋಗ್ಯ ಇಲಾಖೆಯ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಲಕ್ಷ್ಮಿಕಾಂತ ಚಾಲನೆ ನೀಡಿದರು.

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ, ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ಕಾರ್ಯಕ್ರಮ, ಡೆಂಗಿ ಜಾಗೃತಿ, ನವಜಾತ ಶಿಶು ಮತ್ತು ಗರ್ಭಿಣಿಯರ ಆರೈಕೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಫೆಬ್ರುವರಿ 8ರಂದು ಶಹಾಪುರ ತಾಲ್ಲೂಕಿನ ಚಟ್ನಳ್ಳಿ, ಮೂಡಬಾಳ, ನಾಗನಟಗಿ, ಚಾಮನಾಳ, ಬೀರನೂರ ಗ್ರಾಮಗಳಲ್ಲಿ ಪ್ರದರ್ಶನ ನಡೆಯಲಿದೆ. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದರ ಶಂಕರ, ಸಿಬ್ಬಂದಿಗಳಾದ ಸುದರ್ಶನ, ವಿದ್ಯಾ, ಅರುಣಾ, ಜಾವೀದ್, ಮೌನೇಶ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು