ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಶಾ ಕಾರ್ಯಕರ್ತೆಯರನ್ನು ರಕ್ಷಿಸಿ’

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ
Last Updated 29 ಮೇ 2020, 17:05 IST
ಅಕ್ಷರ ಗಾತ್ರ

ಯಾದಗಿರಿ: ‘ಆಶಾ ಕಾರ್ಯಕರ್ತೆಯರಿಗೆ ಅಗತ್ಯವಿರುವ ಮಾಸ್ಕ್ ಹಾಗೂ ಸ್ಯಾನಿಟೈಸರ್, ಗ್ಲೌಸ್‍ಗಳನ್ನು ನೀಡಬೇಕು. ಭದ್ರತೆ ಕಲ್ಪಿಸಬೇಕು. ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದವರಿಗೆ ಶಿಕ್ಷೆ ನೀಡಿ, ಮದ್ಯ ನಿಷೇಧಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ (ಎಐಯುಟಿಯುಸಿ) ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಸಂಘದ ಅಧ್ಯಕ್ಷೆ ಡಿ.ಉಮಾದೇವಿ ಮಾತನಾಡಿ, ‘ಲಾಕ್‍ಡೌನ್‍ನಿಂದಾಗಿ ಜನ ಮನೆಗಳಲ್ಲೇ ಸುರಕ್ಷಿತವಾಗಿರುವ ವಿಷಮ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಉತ್ತಮವಾಗಿ ಕಾರ್ಯನಿರ್ವಹಿಸುತ್ತಾ ರೋಗ ಹರಡುವಿಕೆಯನ್ನು ತಡೆಗಟ್ಟಲು ಈಗಲೂ ಶ್ರಮಿಸುತ್ತಿದ್ದಾರೆ. ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದು, ಆಶಾ ಸಮುದಾಯಕ್ಕೆ ತುಂಬಾ ಭಯ-ಆತಂಕವನ್ನು ಉಂಟುಮಾಡಿದೆ ಎಂದರು.

ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ ಸಂಘದ ಪದಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT