ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿ ದಿವಸ ಆಚರಣೆ: ವಿರೋಧ

ಜಯ ಕರ್ನಾಟಕ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
Last Updated 14 ಸೆಪ್ಟೆಂಬರ್ 2022, 5:22 IST
ಅಕ್ಷರ ಗಾತ್ರ

ಯಾದಗಿರಿ: ಕೇಂದ್ರ ಸರ್ಕಾರ ಸೆಪ್ಟೆಂಬರ್ 14ರಂದು ಹಿಂದಿ ದಿವಸ್‌ ಆಚರಿಸುವ ಬಗ್ಗೆ ಮತ್ತು ಆಡಳಿತದಲ್ಲಿ ಹಿಂದಿಯನ್ನು ಹೇರುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಜಯ ಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಮಾಯಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಸಂಘಟನೆ ಜಿಲ್ಲಾಧ್ಯಕ್ಷ ಬಿ.ಎನ್.ವಿಶ್ವನಾಥ ನಾಯಕ ಮಾತನಾಡಿ, ಸೆಪ್ಟೆಂಬರ್ 14 ಅನ್ನು ಹಿಂದಿ ದಿವಸವೆಂದು ಆಚರಿಸುವ ಕುರಿತು ಪ್ರಸ್ತಾವನೆಯನ್ನು ಹೊರಡಿಸಿದ್ದು, ಅದಕ್ಕೆ ಕರ್ನಾಟಕ ಸರ್ಕಾರವೂ ಬೆಂಬಲ ತೋರಿಸಿದೆ ಎಂದು ಆರೋಪಿಸಿದರು.

ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ. ದೇಶದ 22 ಭಾಷೆಗಳಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿದೆ. ಅದರಲ್ಲಿ ಕನ್ನಡ ಮತ್ತು ಹಿಂದಿಯೂ ಸೇರಿವೆ. ಆದರೆ, ಇಲ್ಲಿ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಉಲ್ಲೇಖ ಮಾಡಿಲ್ಲ ಎಂದರು.

ಸಂವಿಧಾನದ 150 ರ ಪ್ರಕಾರ ಪ್ರತಿಯೊಂದು ರಾಜ್ಯ ಸರ್ಕಾರವೂ ಆಡಳಿತ ಭಾಷೆಯಾಗಿ ತನ್ನ ಮಾತೃಭಾಷೆಯನ್ನೇ ಬಳಸಬೇಕು. ಕಡ್ಡಾಯವಾಗಿ ಅಲ್ಲಿನ ಮಕ್ಕಳಿಗೆ ಮತ್ತು ನಾಗರಿಕರಿಗೆ ಶಿಕ್ಷಣದಲ್ಲಿ ಸಾರ್ವತ್ರಿಕವಾಗಿ ತನ್ನ ಮಾತೃ ಭಾಷೆಗೆ ಒತ್ತು ನೀಡಿ ಪ್ರೋತ್ಸಾಹಿಸಬೇಕೆಂದು ತಿಳಿಸಲಾಗಿದೆ. ಇಲ್ಲಿಯೂ
ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಉಲ್ಲೇಖಿಸಿಲ್ಲ. ಇಷ್ಟೆಲ್ಲಾ ಉಲ್ಲೇಖಗಳು ಭಾಷೆಗಳ ವಿಚಾರವಾಗಿಯೇ ಸಂವಿಧಾನದಲ್ಲಿದ್ದರೂ ಕೇಂದ್ರ ಸರ್ಕಾರ ತನ್ನ ಮಲತಾಯಿ ಧೋರಣೆಯಿಂದ ಮತ್ತು ತಮಗಿರುವ ಹಿಂದಿ ಭಾಷೆಯ ಮೇಲಿನ ಮೋಹದಿಂದಾಗಿ ರಾಷ್ಟ್ರದ ಎಲ್ಲ ರಾಜ್ಯಗಳ ಮೇಲೂ ಹಿಂದಿಯನ್ನು ಹೇರುತ್ತಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾಡಿರುವಂಥ ಮೋಸ ಹಾಗೂ ರಾಜ್ಯಗಳ ಸಾರ್ವಭೌಮತ್ವ ಪ್ರಶ್ನಿಸುವಂತಿದ್ದು ಎಂದರು.

ಈ ವೇಳೆ ರಾಜ್ಯ ಕಾರ್ಯದರ್ಶಿ ವಿಯಕುಮಾರ ಮೊಗದಂಪುರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ ಗುತ್ತೇದಾರ, ಸಂಘಟನಾ ಕಾರ್ಯದರ್ಶಿ ವಿಶ್ವಾರಾಧ್ಯ ಹುಲಕಲ್, ರಿಯಾಜ್ ಪಟೇಲ್‌, ನಾಗರಾಜ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT