ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಂಕ್ ಅಧಿಕಾರಿಗಳ ವಿರುದ್ಧ ಪ್ರತಿಭಟನೆ 16ರಂದು

Published : 11 ಆಗಸ್ಟ್ 2024, 16:19 IST
Last Updated : 11 ಆಗಸ್ಟ್ 2024, 16:19 IST
ಫಾಲೋ ಮಾಡಿ
Comments

ಯಾದಗಿರಿ: ಸಾಲ ಕಟ್ಟುವಂತೆ ನೋಟಿಸ್ ನೀಡುವ ಮೂಲಕ ಬ್ಯಾಂಕ್ ಅಧಿಕಾರಿಗಳು ರೈತರಿಗೆ ಕಿರುಕುಳ‌ ನೀಡುತ್ತಿರುವುದನ್ನು ವಿರೋಧಿಸಿ ಆಗಸ್ಟ್ 16ರಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ನವ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಕಾರ್ಯಕಾರಣಿ ಸದಸ್ಯ ಚನ್ನಾರೆಡ್ಡಿ ಪಾಟೀಲ ಗುರುಸುಣಗಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿನ ರೈತರು ರಾಷ್ಟ್ರೀಕೃತ ಬ್ಯಾಂಕ್, ಖಾಸಗಿ ಹಾಗೂ ಸಹಕಾರ ಬ್ಯಾಂಕ್‌ಗಳಿಂದ ಅಧಿಕಾರಿಗಳು ನೀಡುತ್ತಿರುವ ಕಿರುಕುಳಕ್ಕೆ ರೈತರ ಆತ್ಮಹತ್ಯೆಯ ಪ್ರಕರಣಗಳು ಹೆಚ್ಚುತ್ತಿವೆ. ಆತ್ಮಹತ್ಯೆಗಳನ್ನು ತಡೆಯಲು, ಬ್ಯಾಂಕ್ ‌ಅಧಿಕಾರಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದು, ಸಾಲದ‌ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆಯತ್ತ ಮುಖಮಾಡುತ್ತಿರುವುದು ಖೇದಕರ. ಆದ್ದರಿಂದ ಪ್ರತಿಭಟನೆ ನಡೆಸುತ್ತಿದೆ. ಜಿಲ್ಲೆಯ ಎಲ್ಲ ರೈತರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

ರೈತ ಮುಖಂಡ ಭೀಮರಾಯ ಅಣಬಿ, ದೇವಿಂದ್ರ ಅಣಬಿ, ತಿಪ್ಪಣ್ಣ ಗೋನಾಲ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT