ಭಾನುವಾರ, ಆಗಸ್ಟ್ 14, 2022
20 °C

ಕೆಂಭಾವಿ: ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಂಭಾವಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಗುರುವಾರ ಪಟ್ಟಣದ ಉಪತಹಸೀಲ್ದಾರ್ ಕಚೇರಿ ಮುಂದೆ ಸೋಷಲಿಸ್ಟ್ ಯೂನಿಯ್ ಸೆಂಟರ್ ಆಫ್ ಇಂಡಿಯಾ (ಎಸ್.ಯು.ಸಿ.ಐ) ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಘಟನೆ ಜಿಲ್ಲಾ ಸಮಿತಿ ಸದಸ್ಯ ಶರಣಗೌಡ ಗೂಗಲ್, ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಮೋಸ ಮಾಡುತ್ತಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 40 ವರ್ಷಗಳಲ್ಲೇ ದೇಶದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ನಿರುದ್ಯೋಗ ಸೃಷ್ಟಿಯಾಗಿದ್ದು ಉದ್ಯೋಗ ನೀಡುವಲ್ಲಿ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ಆರೋಪಿಸಿದ ಅವರು ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಹಣ ದುಬ್ಬರವನ್ನು ನಿಯಂತ್ರಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳ ಮೇಲಿನ ತೆರಿಗೆ ವಿನಾಯಿತಿ ರದ್ದು ಮಾಡಿ ಮೂಲ ಬೆಲೆಯಲ್ಲೆ ಒದಗಿಸಬೇಕು, ಭ್ರಷ್ಟಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ
ಶಿಕ್ಷೆ ನೀಡಿ ಉದ್ಯೋಗ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವುದು ಸೇರಿ ಹಲವಾರು ಬೇಡಿಕೆಗಳನ್ನು
ಈಡೇರಿಸಲು ಸರ್ಕಾರ ಮುಂದೆ ಬರಬೇಕು ಎಂದು
ಹೇಳಿದರು.

ಮನವಿ ಪತ್ರವನ್ನು ಉಪ ತಹಸೀಲ್ದಾರ್ ಮಲ್ಲಿಕಾರ್ಜುನ ಪಾಟೀಲ ಅವರಿಗೆ ಸಲ್ಲಿಸಿದರು.

ಶಿವರಾಜ ನಗನೂರ, ಸಿದ್ದಣ್ಣ, ಗುರಪ್ಪಗೌಡ, ಗುರುನಾಥರೆಡ್ಡಿಗೌಡ, ವೀರಯ್ಯಸ್ವಾಮಿ, ಬಸಣ್ಣ ದೇಶಪಾಂಡೆ, ಮಲ್ಲಿಕಾರ್ಜುನ, ವೆಂಕಟೇಶ, ಮಹೇಶ, ಶ್ರೀನಿವಾಸ, ಬಸವರಾಜ
ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.