ಮಂಗಳವಾರ, ಮಾರ್ಚ್ 21, 2023
20 °C
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

‘ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಗೊಳಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ರಾಜ್ಯದಾದ್ಯಂತ ಘೋಷಣೆಯಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು.

ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪದಾಧಿಕಾರಿಗಳು, ರಾಜ್ಯ ಸರ್ಕಾರ ಗೊಂದಲದಲ್ಲಿ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಪರೀಕ್ಷೆ ಘೋಷಣೆ ಮಾಡಿರುವುದು ಹಾಸ್ಯಾಸ್ಪದವಾಗಿದೆ. ದ್ವಿತೀಯ ಪಿಯುಸಿ, ಸೆಂಟ್ರಲ್ ಸಿಲೆಬಸ್ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಲಾಗಿದೆ. ಆದರೆ, ರಾಜ್ಯದ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಮಾತ್ರ ಯಾಕೆ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಪ್ರಶ್ನಿಸಿದ್ದಾರೆ.

ಸತತ 2 ವರ್ಷದಿಂದ ಕೊರೊನಾ ಕಾರಣದಿಂದ ಮಕ್ಕಳಿಗೆ ಸರಿಯಾದ ಪಾಠ-ಬೋಧನೆ ಆಗಿಲ್ಲ. ಮಕ್ಕಳು ಹೇಗೆ ಪರೀಕ್ಷೆ ಬರೆಯುತ್ತಾರೆ. ಪಿಯುಸಿ ಮಕ್ಕಳಿಗೊಂದು ನ್ಯಾಯ, ಎಸ್ಸೆಸ್ಸೆಲ್ಸಿ ಮಕ್ಕಳಿಗೊಂದು ನ್ಯಾಯವೇ. ಸರ್ಕಾರ ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಕೊರೊನಾ ಸೋಂಕು ತಗುಲುವುದಿಲ್ಲ ಎನ್ನುವ ಭ್ರಮೆಯಲ್ಲಿರುವುದು ವಿಪರ್ಯಾಸ. ಸರ್ಕಾರ ವಿದ್ಯಾರ್ಥಿಗಳ ಜೊತೆ ಚೆಲ್ಲಾಟ ಆಡುವುದನ್ನು ಬಿಟ್ಟು ಕೂಡಲೇ ಘೋಷಣೆ ಮಾಡಿರುವ ಪರೀಕ್ಷೆಯನ್ನು ರದ್ದುಪಡಿಸಲು ಮುಂದಾಗಬೇಕು. ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂ ತ್ರಿ ಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯಕುಮಾರ ಕಾವಲಿ ಮುಂಡರಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ನಾಯಕ ವರ್ಕನಳ್ಳಿ, ಗುರುಮಠಕಲ್ ತಾಲ್ಲೂಕು ಅಧ್ಯಕ್ಷ ಹೊನ್ನೇಶ ದೊಡ್ಮನಿ, ದೀನು ರಾಠೋಡ ಮುಂಡ್ರಗಿ ತಾಂಡಾ, ಯುವ ಕಾಂಗ್ರೆಸ್ ಮುಖಂಡರಾದ ಅಭಿಷೇಕ ದಾನಸಕೇರಿ, ಕೃಷ್ಣಾ ದಾಸನಕೇರಿ, ನಿರಂಜನ ರಾಠೋಡ, ಸುರೇಶ ಬೆಳಗುಂದಿ, ಭೀಮಾಶಂಕರ ಮುಷ್ಟೂರ, ಬಸು ನಾಟೇಕಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.