ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸರ್ಕಾರ ರೈತರ ನೆರವಿ ಧಾವಿಸಬೇಕು’

ಕೆಂಭಾವಿ: ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Last Updated 24 ನವೆಂಬರ್ 2022, 5:33 IST
ಅಕ್ಷರ ಗಾತ್ರ

ಕೆಂಭಾವಿ: ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಮಂಗಳವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪಟ್ಟಣದ ಹೇಮರೆಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಿಂದ ಮೆರವಣಿಗೆಯಲ್ಲಿ ತೆರಳಿದ ಪ್ರತಿಭಟನಾಕಾರರು ಬಸವೇಶ್ವರ ವೃತ್ತದಲ್ಲಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಂಘದ ರಾಜ್ಯ ಉಪಾಧ್ಯಕ್ಷೆ ಮಹಾದೇವಿ ಬೇವಿನಾಳಮಠ, ಅನೇಕ ಕಾರಣಗಳಿಂದ ರೈರು ಬೆಳೆದ ಬೆಳೆಗಳು ಹಾಳಾಗಿವೆ. ‌ರಾಜ್ಯ ಸರ್ಕಾರಗಳು ಅನ್ನದಾತರ ನೆರವಿಗೆ ಧಾವಿಸಬೇಕು. ಅತಿವೃಷ್ಟಿಗೆ ಒಳಗಾದ ರೈತರಿಗೆ ಕೂಡಲೇ ಪರಿಹಾರ ನೀಡಬೇಕು, ವಲಯದಲ್ಲಿ ಭತ್ತ ಖರೀದಿ ಕೇಂದ್ರ ಸ್ಥಾಪನೆ ಮಾಡಬೇಕು, ನಿಷ್ಕ್ರೀಯಗೊಂಡಿರುವ ಕೆಂಭಾವಿ ಕೃಷಿ ಉತ್ಪನ್ನ ಉಪ ಮಾರುಕಟ್ಟೆಯನ್ನು ಮತ್ತೆ ಚಾಲನೆ ನಿಡಬೇಕು, ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಸಹಾಯಕ ಕೃಷಿ ಅಧಿಕಾರಿ ಸೇರಿದಂತೆ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಬಳಿಕ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ ಅವರಿಗೆ
ಸಲ್ಲಿಸಿದರು.

ಪ್ರಭಟನೆಯಿಂದ ಹಳೇ ಬಸ್ ನಿಲ್ದಾಣ ಪ್ರದೇಶದಲ್ಲಿ ಕೆಲಕಾಲ ಪ್ರಯಾಣಿಕರಿಗೆ ತೊಂದರೆ ಉಂಟಾಯಿತು. ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

ರಾಜ್ಯ ಸಂಘಟನಾ ಕಾರ್ಯದರ್ಶಿ ಬಸನಗೌಡ ಬಿರಾದಾರ, ರೈತ ಮುಖಂಡರಾದ ಎಚ್. ಆರ್. ಬಡಿಗೇರ, ಬಸವಂತ್ರಾಯ ಚೌಧರಿ, ಬೇಬಿ ರಾಥೋಡ, ಕಮಲಾಬಾಯಿ, ರಾಮನಗೌಡ, ಧರ್ಮಣ್ಣ ಮಳಕೇರಿ, ಯಮನಪ್ಪ ಕುಂಬಾರ, ವಿಕ ನಾಯ್ಕೋಡಿ, ಬಸವರಾಜ ಬೂದಿಹಾಳ, ಕನಕಪ್ಪ ವಂದಗನೂರ ಸೇರಿದಂತೆ ಹಲವರು ರೈತ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT