ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಭಾವಿ ತಾಲ್ಲೂಕು ಕೇಂದ್ರ ಘೋಷಣೆಗೆ ಒತ್ತಾಯ

Last Updated 9 ಸೆಪ್ಟೆಂಬರ್ 2020, 1:32 IST
ಅಕ್ಷರ ಗಾತ್ರ

ಕೆಂಭಾವಿ: ಕೆಂಭಾವಿ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಮುಖಂಡರು ಉಪ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ರೈತ ಸಂಘದ ವಲಯಾಧ್ಯಕ್ಷ ಎಚ್.ಆರ್.ಬಡಿಗೇರ್ ಮಾತನಾಡಿ, ಕೆಂಭಾವಿಯನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ 2 ದಶಕಗಳಿಂದ ಪ್ರತಿಭಟನೆ ಮಾಡಲಾಗಿದೆ. ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿಕೊಂಡರೂ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

1983ರಲ್ಲಿ ಹುಂಡೇಕಾರ್ ಸಮಿತಿಯಲ್ಲಿ ಕೆಂಭಾವಿ ಪಟ್ಟಣವು ತಾಲ್ಲೂಕು ಕೇಂದ್ರವಾಗಲು ಎಲ್ಲ ಅರ್ಹತೆ ಹೊಂದಿದೆ ಎಂದು ಶಿಫಾರಸ್ಸು ಮಾಡಲಾಗಿದೆ. ಅದರಂತೆ ವಾಸುದೇವರಾವ್ ಸಮಿತಿಯೂ ಹಸಿರು ನಿಶಾನೆ ತೋರಿಸಿದೆ. ಈ ಬಗ್ಗೆ ಜನಪ್ರತಿನಿಧಿಗಳು ಧ್ವನಿ ಎತ್ತಿ ಕೆಂಭಾವಿ ಪಟ್ಟಣವು ತಾಲ್ಲೂಕು ಕೇಂದ್ರವಾಗಿ ಘೋಷಣೆ ಆಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಮುಖಂಡ ಭೀಮನಗೌಡ ಕಾಚಾಪುರ ಮಾತನಾಡಿ, ಕೆಂಭಾವಿಗಿಂತಲೂ ಕಡಿಮೆ ಜನಸಂಖ್ಯೆ ಇರುವ ಗ್ರಾಮಗಳನ್ನು ತಾಲ್ಲೂಕು ಕೇಂದ್ರವೆಂದು ಘೋಷಣೆ ಮಾಡಲಾಗಿದೆ. ಕೆಂಭಾವಿ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪ ಹೋರಾಟ ಮಾಡುವುದರೊಂದಿಗೆ ಪುರಸಭೆ ಮತ್ತು ಗ್ರಾಮ ಪಂಚಾಯಿತಿ ಚುನಾವಣೆ ಬಹಿಷ್ಕರಿಸಲಾಗುವುದು ಎಂದು ಎಚ್ಚರಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಉಪ ತಹಶೀಲ್ದಾರ್ ಮಲ್ಲಿಕಾರ್ಜುನ ಪಾಟೀಲ್ ಅವರಿಗೆ ಸಲ್ಲಿಸಿದರು.

ಕರವೇ ಮುಖಂಡರಾದ ಬಾವಸಾಬ ನಧಾಪ್, ಶ್ರೀಶೈಲ್ ಕಾಚಾಪುರ, ಮಾದಿಗ ಯುವ ಸೇನೆ ಮುಖಂಡ ಸಾಯಬಣ್ಣ, ರೈತ ಸಂಘದ ನಗರ ಘಟಕದ ಅಧ್ಯಕ್ಷ ದೇವಪ್ಪ ಭೋವಿ, ಕರ್ನಾಟಕ ನವ ನಿರ್ಮಾಣ ಸೇನೆ ಮುಖಂಡ ಚಾಂದಾಪಾಶಾ ಮುಲ್ಲಾ, ನಿಜಶರಣ ಅಂಬಿಗರ ಚೌಡಯ್ಯ ಸಮಾಜ ಸೇವಾ ಸಂಘ ನಗರ ಘಟಕದ ಅಧ್ಯಕ್ಷ ಚಂದ್ರಶೇಖರ ಕುಳಿಗೇರಿ, ದಸಂಸ ಮುಖಂಡರಾದ ಭೀಮಪ್ಪ ಡಂಬಳ, ಕಲ್ಯಾಣಕುಮಾರ ಹೊಸಮನಿ, ಮುಖಂಡರಾದಯಂಕನಗೌಡ ಪಾಟೀಲ, ಹಳ್ಳೆಪ್ಪ ಕವಾಲ್ದಾರ, ತುಳಜಾರಾಮ ವಕೀಲ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT