ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿ ಹೆಚ್ಚಳಕ್ಕೆ ಜು. 11ಕ್ಕೆ ಪ್ರತಿಭಟನೆ

ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕುವ ಕಾರ್ಯಕ್ರಮ: ಮೊಗ್ದಂಪುರ
Last Updated 3 ಜುಲೈ 2022, 2:19 IST
ಅಕ್ಷರ ಗಾತ್ರ

ಪ್ರಜಾವಾಣಿ ವಾರ್ತೆ

ಯಾದಗಿರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಮಾಡುವಂತೆ ಜುಲೈ 11ಕ್ಕೆ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಮರೆಪ್ಪ ನಾಯಕ ಮೊಗ್ದಂಪುರ ಹೇಳಿದರು.

ನಗರದ ವಾಲ್ಮೀಕಿ ಭವನದಲ್ಲಿ ಜಿಲ್ಲೆಯ ಎಲ್ಲಾ ಸಮುದಾಯಗಳ ಸಂಘಟನೆಯ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಹಾಗೂ ಸ್ಟಾಭಿಮಾನಿ ಎಸ್‌ಸಿ, ಎಸ್‌ಟಿ ಸಂಘಟನೆಗಳ ಒಕ್ಕೂಟ ಮತ್ತು ಎಲ್ಲಾ ಎಸ್‌ಸಿ, ಎಸ್‌ಟಿ ಸಮುದಾಯಗಳ ಸ್ವಾಮೀಜಿಯವರ ನಿರ್ಣಯದಂತೆ ಜುಲೈ 11 ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕುವ ಮುಖಾಂತರ ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿಸಿದರು.

ಬಿಎಸ್‌ಪಿ ಮುಖಂಡ ವಾಸು ಮಾತನಾಡಿದರು.

ವಾಲ್ಮೀಕಿ ಸಮಾಜದ ಮುಖಂಡ ಗೌಡಪ್ಪಗೌಡ ಅಲ್ದಾಳ ಮಾತನಾಡಿ, ಮೀಸಲಾತಿ ಹೆಚ್ಚಳಕ್ಕಾಗಿ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮಿಗಳು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ 143 ದಿನಗಳಿಂದ ಎಸ್‌ಟಿ ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ಅಹೋರಾತ್ರಿ ಧರಣಿ ಕುಳಿತು ಒತ್ತಾಯಿಸುತ್ತಿದ್ದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಜುಲೈ 11ರಂದು ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಶೋಷಿತ ಸಮುದಾಯಗಳ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಮಾನಸಿಂಗ್ ಚವಾಣ್‌, ಬಿ.ಎಂ. ಪೂಜಾರಿ, ಅಶೋಕ ಗಾಜರಕೋಟ, ಪರಶುರಾಮ ಚವಾಣ್‌, ರಾಮು ನಾಯಕ, ಮರೆಪ್ಪ ಪ್ಯಾಟಿ, ತಿಮ್ಮಪ್ಪ ನಾಯಕ, ಹಣಮಂತ ಮೇದಾರ, ಬೋವಿ ಸಮಾಜದ ಮುಖಂಡ ಬಸವರಾಜ ಮುದ್ನಾಳ, ಬುಡ್ಗಜಂಗಮ ಮುಖಂಡ ಮಾರುತಿ, ಕೊರಮ ಸಮಾಜದ ಎ.ಪಿ.ಭಜಂತ್ರಿ, ಭೀಮರಾಯ ಠಾಣಗುಂದಿ, ರಾಘವೇಂದ್ರ ನಾಯಕ, ಅಬ್ದುಲ್ ಕರಿಂ, ಹಣಮಂತ ನಾಯಕ, ಚಂದ್ರಕಾಂತ ಹತ್ತಿಕುಣಿ, ದೊಡ್ಡಯ್ಯ ನಾಯಕ ಶರಣಪ್ಪ ಜಾಕನಳ್ಳಿ, ಮೋನಪ್ಪ ಹಳಿಗೇರಾ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT