‘ಕೃಷಿ ವಿಧಾನಗಳ ಮಾಹಿತಿ ಒದಗಿಸಿ’

ಯಾದಗಿರಿ: ಗುಂಪು ಅಥವಾ ಗುಚ್ಛ ಮಾದರಿಯಲ್ಲಿ ರೈತ ಫಲಾನುಭವಿಗಳನ್ನು ಆಯ್ಕೆ ಮಾಡಿಕೊಂಡು ಅವರಿಗೆ ಪಾರಂಪರಾಗತ ಕೃಷಿ ವಿಧಿವಿಧಾನಗಳ ಪ್ರಾತ್ಯಕ್ಷಿಕೆಯನ್ನು ತಿಳಿಸಿಕೊಡುವಂತೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಪಾರಂಪರಾಗತ ಕೃಷಿ ವಿಕಾಸ ಯೋಜನೆ ಕುರಿತ ಸಭೆಯಲ್ಲಿ ಮಾತನಾಡಿದರು.
ಈ ಯೋಜನೆಯಡಿ ಯಾದಗಿರಿ ತಾಲ್ಲೂಕು ಆಯ್ಕೆ ಮಾಡಿಕೊಳ್ಳಲಾಗಿದ್ದು, ತಾಲ್ಲೂಕಿನ 460 ಹೆಕ್ಟೇರ್ ಪ್ರದೇಶದಲ್ಲಿ ಪಾರಂಪರಿಕ ಕೃಷಿ ವಿಧಾನಗಳನ್ನು ಅಳವಡಿಸಿಕೊಡುವ ಗುರಿ ನಿಗದಿಪಡಿಸಲಾಗಿದೆ. ಈ ಪ್ರದೇಶದಲ್ಲಿ ತರಕಾರಿ ಸೇರಿದಂತೆ ವಿವಿಧ ಹಣ್ಣಿನ ಬೆಳೆಗಳಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಪಾರಂಪರಾಗತ ಕೃಷಿಯಲ್ಲಿ ಅತಿ ಹೆಚ್ಚು ಸಂಖ್ಯೆಯ ರೈತರು ಭಾಗವಹಿಸಲು ಅನುಕೂಲವಾಗುವಂತೆ ಕೃಷಿ ಇಲಾಖೆಯಿಂದ ವ್ಯಾಪಕ ಜಾಗೃತಿ ಮೂಡಿಸಬೇಕು. ದೊಡ್ಡ ದೊಡ್ಡ ನಗರ ಪ್ರದೇಶದ ಮಾರುಕಟ್ಟೆಗಳಲ್ಲಿ ಪರಂಪರಾಗತ (ಆಗ್ರೋನಿಕ್) ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಜಿಲ್ಲೆಯ ರೈತರಿಗೆ ಆ ಮಾರುಕಟ್ಟೆಯ ಸಂಪರ್ಕ ಕಲ್ಪಿಸಿಕೊಡಬೇಕು, ಈ ಸಂಬಂಧ ಕೃಷಿ ಅಧಿಕಾರಿಗಳು ಗಮನಹರಿಸುವಂತೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್., ಸುಧಾನ ಸಂಸ್ಥೆಯ ಶರಕ್ ಕುಮಾರ್, ಬೆಸ್ಟ್ ರೆಕಗ್ನಿಷನ್ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ಮುಖ್ಯಸ್ಥರು, ಆರ್‌ಎಸ್ಕೆ ಬೀರಲಿಂಗಪ್ಪ, ಡಾ.ರೇವಣ್ಣಪ್ಪ, ಪ್ರಗತಿ ಪರ ರೈತರಾದ ಶಂಕಗೌಡ ಮಾಲಿಪಾಟೀಲ, ಶರಣಪ್ಪ ಇದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.