ಶುಕ್ರವಾರ, ಮಾರ್ಚ್ 31, 2023
32 °C
ಜಯ ಕರ್ನಾಟಕ ರಕ್ಷಣಾ ಸೇನೆಯಿಂದ ಜಿಲ್ಲಾಧಿಕಾರಿಗೆ ಒತ್ತಾಯ

ಬಾಲಕರ ಕುಟುಂಬಕ್ಕೆ ಪರಿಹಾರ ನೀಡಿ: ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರ ಹೊರವಲಯದ ಭೀಮಾ ನದಿಯಲ್ಲಿ ಮುಳುಗಿ ಮೃತಪಟ್ಟ 4 ಬಾಲಕರ ಕುಟುಂಬಕ್ಕೆ ಪರಿಹಾರ ನೀಡುವಂತೆ ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ವತಿಯಿಂದ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. 

ಭಾನುವಾರ 4 ಜನ ಬಾಲಕರು ಮುಳುಗಿ ಮೃತಪಟ್ಟ ಘಟನೆ ಜರುಗಿರುವುದು ವಿಷಾದಕರ ಸಂಗತಿ. ನಾಲ್ಕು ಜನ ಬಡ ವಿದ್ಯಾರ್ಥಿಗಳಾಗಿದ್ದು, ಇವರ ಕುಟುಂಬಕ್ಕೆ ಸರ್ಕಾರ, ಜಿಲ್ಲಾಡಳಿತ ಸೂಕ್ತ ಪರಿಹಾರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಬ್ರಿಜ್ ಕಂ ಬ್ಯಾರೇಜ್ ಸ್ಥಳದಲ್ಲಿ ಸೂಕ್ತ ಭದ್ರತೆ ಮತ್ತು ಇನ್ನಿತರ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಘಟನೆಯ ವತಿಯಿಂದ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತೇವೆ ಎಂದರು.

ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಜಲ್ಲಪ್ಪನೋರ್ಮು, ಮುಖಂಡರಾದ ಎಚ್ ಕೆ. ಕುರಕುಂದಾ, ಪ್ರಭು ಯಡ್ಡಳ್ಳಿ, ಲಕ್ಷ್ಮಣ ರಾಮಸಮುದ್ರ, ರವಿಕುಮಾರ ಯಡ್ಡಳ್ಳಿ ಇದ್ದರು. ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ರಾಗಪ್ರಿಯಾ ಸೂಕ್ತ ಕ್ರಮದ ಭರವಸೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು