ಭಾನುವಾರ, ಜೂಲೈ 12, 2020
22 °C

ಯಾದಗಿರಿ ಜಿಪಂ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲಾ ಪಂಚಾಯಿತಿ ಹಂಗಾಮಿ ಅಧ್ಯಕ್ಷರಾಗಿ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ ಅವರು ಜೂನ್ 26ರಿಂದ ಪೂರ್ವಾನ್ವಯವಾಗುವಂತೆ ಸೋಮವಾರ ಅಧಿಕಾರ ಸ್ವೀಕರಿಸಿದರು.

ಸರ್ಕಾರದ ಅಧಿಕೃತ ಜ್ಞಾಪನಾ ಪತ್ರದಲ್ಲಿ ಆದೇಶಿಸಿದಂತೆ ರಾಜಶೇಖರಗೌಡ ಪಾಟೀಲ ವಜ್ಜಲ್ ಇವರ ರಾಜೀನಾಮೆಯಿಂದ ಅಧ್ಯಕ್ಷ ಸ್ಥಾನವು ತೆರವಾಗಿರುವುದರಿಂದ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 194 ರನ್ವಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಅಧಿಕಾರ ಮತ್ತು ಕರ್ತವ್ಯಗಳನ್ನು ಉಪಾಧ್ಯಕ್ಷೆ ಜೂನ್‌ 26ರಿಂದ ಜಾರಿಗೆ ಬರುವಂತೆ ನಿರ್ವಹಿಸಲು ಆದೇಶಿಸಿರುವುದರಿಂದ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ ಅವರು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಜಲಸಂಪನ್ಮೂಲ ಸಚಿವರ ಪ್ರವಾಸ ನಾಳೆ

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಜುಲೈ 1ರಂದು ಬುಧವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಮಸ್ಕಿ ತಾಲ್ಲೂಕಿನ ಮೂಲಕ ಬೆಳಿಗ್ಗೆ 11 ಗಂಟೆಗೆ ಆಗಮಿಸುವ ಅವರು, ರಾಯಚೂರು-ತಿಂಥಣಿ ಯೋಜನೆ ಬಗ್ಗೆ ಸ್ಥಳ ಪರಿಶೀಲನೆ ಮಾಡುವರು ಹಾಗೂ ತಿಂಥಣಿ ಮೌನೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವರು. ಮಧ್ಯಾಹ್ನ 2.30 ಗಂಟೆಗೆ ಭೀಮರಾಯನಗುಡಿಯಲ್ಲಿ ಭೀಮರಾಯನಗುಡಿ-ಕೆಬಿಜೆಎನ್‍ಎಲ್ ವ್ಯಾಪ್ತಿಯ ಮುಖ್ಯ ಅಭಿಯಂತರರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 5 ಗಂಟೆಗೆ ಕಲಬುರ್ಗಿಗೆ ಪ್ರಯಾಣ ಬೆಳೆಸುವರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು