ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನನ್ನ ಪತಿ ಕಳೆದ 7 ತಿಂಗಳಿಂದ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈಗ ಮತ್ತೆ ಸೆನ್ ಠಾಣೆಗೆ ವರ್ಗಾವಣೆ ಮಾಡಿದ್ದರು. ನಗರ ಠಾಣೆಯಲ್ಲಿ ಮುಂದುವರಿಯಲು ₹30 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದಿದ್ದರು ಎಂದು ಹೇಳಿದರು.
ಅವಧಿ ಮುಗಿಯುವವರೆಗೆ ಇಲ್ಲಿ ಮುಂದುವರಿಸಲು ಹೇಳಿದಾಗ ಶಾಸಕ, ಅವರ ಪುತ್ರ ಹಣ ಕೊಡದಿದ್ದರೆ ಇಲ್ಲಿ ಯಾಕೆ ಇರುತ್ತಿ ಎಂದು ಹೇಳಿ ಜಾತಿ ನಿಂದನೆ ಮಾಡಿದ್ದಾರೆ. ಇದರಿಂದ ಖಿನ್ನತೆ ಒಳಗಾಗಿದ್ದರು ಎಂದು ಪತ್ನಿ ಆರೋಪಿಸಿದ್ದಾರೆ.
ಹೀಗಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಈ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ’ಎಕ್ಸ್’ ಖಾತೆಯಲ್ಲಿ ವರ್ಗಾವಣೆ ದಂಧೆ ಬಗ್ಗೆ ಆರೋಪಿಸಿದ್ದಾರೆ.