‘ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಕನಕಪುರ ತಾಲ್ಲೂಕಿನ ಮಾಳಗಾಳ ಗ್ರಾಮದಲ್ಲಿ ಇತ್ತೀಚೆಗೆ ದಲಿತ ಯುವಕನೊಬ್ಬನ ಕೈ ಕತ್ತರಿಸಲಾಗಿತ್ತು. ಈಗ ಪರಶುರಾಮ ಅವರು ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ದಲಿತ ಸಮುದಾಯ ಆತಂಕಕ್ಕೆ ಒಳಗಾಗಿದೆ. ಆದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ದಲಿತ ಸಂಘಟನೆಗಳ ಮುಖಂಡರೊಂದಿಗೆ ರಾಜ್ಯಮಟ್ಟದ ಸಭೆ ಆಯೋಜಿಸಿ, ದಲಿತರಿಗೆ ರಕ್ಷಣೆ ಒದಗಿಸುವ ಭರವಸೆ ನೀಡಬೇಕು’ ಎಂದು ಹೇಳಿದ್ದಾರೆ.