ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹತ್ತಿಕುಣಿ | ಕಾಲೇಜು ಕಟ್ಟಡಕ್ಕಿಲ್ಲ ವಿದ್ಯುತ್ ಭಾಗ್ಯ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹತ್ತಿಕುಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಿಲ್ಲೆಗೆ ಪ್ರಥಮ
Published 30 ಜೂನ್ 2024, 7:00 IST
Last Updated 30 ಜೂನ್ 2024, 7:00 IST
ಅಕ್ಷರ ಗಾತ್ರ

ಹತ್ತಿಕುಣಿ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಓದಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಗ್ರಾಮದಲ್ಲಿ ನಿರ್ಮಿಸಲಾದ ಪದವಿ ಪೂರ್ವ ಮಹಾವಿದ್ಯಾಲಯದ ಕಟ್ಟಡವನ್ನು ವಿದ್ಯುತ್, ಕುಡಿಯುವ ನೀರು ಹಾಗೂ ಶೌಚಾಲಯ ಸೇರಿದಂತೆ ಇತರ ಮೂಲ ಸೌಕರ್ಯಗಳ ಕೊರತೆ ಕಾಡುತ್ತಿದೆ. ಇದರಿಂದ ಪರಿಣಾಮಕಾರಿ ಬೋಧನೆ ಸಾಧ್ಯವಾಗುತ್ತಿಲ್ಲ.

2007ರಲ್ಲಿ ಆರಂಭವಾದ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಮೂಲ ಸೌಕರ್ಯ ಕೊರತೆಯ ನಡುವೆಯೂ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿನಿ ಶ್ರೀದೇವಿ 600ಕ್ಕೆ 587 (ಶೇ 97.83) ಅಂಕ ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಪ್ರಸ್ತುತ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ವರ್ಷದ 96 ವಿದ್ಯಾರ್ಥಿಗಳು ಓದುತ್ತಿದ್ದು, ಇಂಗ್ಲಿಷ್ ಮತ್ತು ಕನ್ನಡ ವಿಷಯಗಳಿಗೆ ಅತಿಥಿ ಉಪನ್ಯಾಸಕರಿದ್ದಾರೆ.

ಯರಗೋಳ ಸರ್ಕಾರಿ ಪದವಿ ಮಹಾವಿದ್ಯಾಲಯ:

2003ರಲ್ಲಿ ಆರಂಭವಾದ ಪದವಿ ಪೂರ್ವ ಕಾಲೇಜು (ಕಲಾ ವಿಭಾಗ) ರಜತ ಮಹೋತ್ಸವದ ಹೊಸ್ತಿಲಲ್ಲಿದೆ.

ಇಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಅಧಿಕಾರಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕಾಲೇಜಿಗೆ ಶೇ 85ರಷ್ಟು ಫಲಿತಾಂಶ ಬಂದಿದೆ. ಐವರು ವಿದ್ಯಾರ್ಥಿಗಳು ಉನ್ನತ ಶ್ರೇಣಿ, 34 ಪ್ರಥಮ, 16 ದ್ವಿತೀಯ, ಇಬ್ಬರು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಪ್ರಸ್ತುತ ಪ್ರಥಮ ವರ್ಷ 41, ದ್ವಿತೀಯ ವರ್ಷದಲ್ಲಿ 53 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ.

ಅರ್ಥಶಾಸ್ತ್ರ, ಇಂಗ್ಲಿಷ್ ವಿಷಯಗಳಿಗೆ ಕಾಯಂ ಉಪನ್ಯಾಸಕರಿಲ್ಲ. ಅತಿಥಿ ಉಪನ್ಯಾಸಕರ ಮೂಲಕ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿಸಲಾಗುತ್ತಿದೆ. ಸ್ವಂತ ಜಾಗದಲ್ಲಿ ಸುಸಜ್ಜಿತ ಕಟ್ಟಡವಿದೆ. ಕುಡಿಯುವ ನೀರು, ಶೌಚಾಲಯ ಹಾಗೂ ಗ್ರಂಥಾಲಯ ವ್ಯವಸ್ಥೆ ಇದೆ.

ಪ್ರತಿವರ್ಷ ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿ ಗ್ರಾಮ, ಪಾಲಕರು ಹಾಗೂ ವಿದ್ಯಾಲಯಕ್ಕೆ ಹೆಸರು ತರುತ್ತಿದ್ದಾರೆ. ಕಾಲೇಜಿನಿಂದ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.

ಬೀಸಲಪ್ಪ ಕಟ್ಟಿಮನಿ
ಬೀಸಲಪ್ಪ ಕಟ್ಟಿಮನಿ
ಮೊಹಮ್ಮದ್ ಅಬ್ದುಲ್ಲಾ
ಮೊಹಮ್ಮದ್ ಅಬ್ದುಲ್ಲಾ

ಕಾಲೇಜು ಆವರಣದಲ್ಲಿ ವಿಶಾಲವಾದ ಜಾಗ ಗ್ರಾಮೀಣ ವಿದ್ಯಾರ್ಥಿನಿಯರಿಗೆ ಅನುಕೂಲ

ಮಹಾವಿದ್ಯಾಲಯ ಸುಂದರವಾದ ಕಟ್ಟಡ ಹೊಂದಿದೆ. ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಡಿ–ಗ್ರೂಪ್ (ಸಿಪಾಯಿ) ನೌಕರರನ್ನು ತೆಗೆದುಕೊಳ್ಳಲಾಗಿದೆ

-ಬೀಸಲಪ್ಪ ಕಟ್ಟಿಮನಿ ಪ್ರಾಂಶುಪಾಲರು ಯರಗೋಳ

ಹಸಿರು ಪರಿಸರದಲ್ಲಿ ಉತ್ತಮ ಕಟ್ಟಡ ಇದೆ. ವಿದ್ಯುತ್ ಶುದ್ಧ ಕುಡಿಯುವ ನೀರು ಶೌಚಾಲಯದ ಕೊರೆತೆ ಇದೆ. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗೆ ಪತ್ರದ ಮೂಲಕ ಸಮಸ್ಯೆ ಗಮನಕ್ಕೆ ತರಲಾಗಿದೆ

- ಮೊಹಮ್ಮದ್ ಅಬ್ದುಲ್ಲಾ ಪ್ರಾಂಶುಪಾಲ ಹತ್ತಿಕುಣಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT