ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು; 6,457 ವಿದ್ಯಾರ್ಥಿಗಳಿಗೆ ಪರೀಕ್ಷೆ

ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯಿಂದಲೇ ಮಾಸ್ಕ್‌, ಪರೀಕ್ಷಾರ್ಥಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ
Last Updated 17 ಜೂನ್ 2020, 16:51 IST
ಅಕ್ಷರ ಗಾತ್ರ

ಯಾದಗಿರಿ: ಗುರುವಾರ (ಜೂನ್‌18) ನಡೆಯಲಿರುವ ಪಿಯು ಇಂಗ್ಲಿಷ್‌ ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡಿದೆ.

ಜಿಲ್ಲೆಯಲ್ಲಿ 13 ಪರೀಕ್ಷಾ ಕೇಂದ್ರಗಳಿದ್ದು,6,457ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದಾರೆ. ಅಲ್ಲದೆ ಬೇರೆ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಯಾದಗಿರಿ ಜಿಲ್ಲೆಯ 549 ವಿದ್ಯಾರ್ಥಿಗಳು ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್: ಇಂಗ್ಲಿಷ್‌ ಪರೀಕ್ಷೆ ನಡೆಯುವ ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಈಗಾಗಲೇ ಸಾನಿಟೈಸ್ ಮಾಡಲಾಗಿದೆ. ಅಲ್ಲದೆ ಕೊಠಡಿಗಳನ್ನು ತೊಳೆದು ಸ್ವಚ್ಛಗೊಳಿಸಲಾಗಿದೆ. ಈ ಬಾರಿ ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದರು.

ವಿದ್ಯಾರ್ಥಿಗಳನ್ನು ಕರೆ ತರಲು ಉಪನ್ಯಾಸಕರು: ಬಸ್‌ಗಳಲ್ಲಿ ವಿದ್ಯಾರ್ಥಿಗಳನ್ನು ಕರೆ ತರಲು ಪ್ರತಿ ತಾಲ್ಲೂಕಿನಲ್ಲಿ ಇಬ್ಬರು ಉಪನ್ಯಾಸಕರನ್ನು ನೇಮಕ ಮಾಡಲಾಗಿದೆ. ಈಗಾಗಲೇ ಬಸ್‌ ಮಾರ್ಗ, ವಿದ್ಯಾರ್ಥಿಗಳು ಎಲ್ಲಿಗೆ ಬರಬೇಕು ಎನ್ನುವ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಗಿದೆ. ಅಲ್ಲದೆ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳಲಾಗಿದೆ. ಯಾದಗಿರಿ ತಾಲ್ಲೂಕಿನಲ್ಲಿ ಇಂಗ್ಲಿಷ್‌ ಪರೀಕ್ಷೆಗೆ ಅತಿ ಹೆಚ್ಚು ಅಂದರೆ 2,015 ವಿದ್ಯಾರ್ಥಿಗಳಿದ್ದಾರೆ. ಕೆಂಭಾವಿಯಲ್ಲಿ 198 ಪಿಯು ವಿದ್ಯಾರ್ಥಿಗಳಿದ್ದಾರೆ.

‘ಮಂಗಳೂರಿನಲ್ಲಿ ಪಿಯು ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿರುವ ಯಾದಗಿರಿ ನಗರದ ವಿದ್ಯಾರ್ಥಿನಿ ಜೆಸಿಕಾ ಗುರಪ್ಪನೋರ ಲಾಕ್‌ಡೌನ್ವೇಳೆಮುಂಬೈನ ಕಲ್ಯಾಣ್‌ಗೆ ತೆರಳಿದ್ದರು.ಪರೀಕ್ಷೆ ಬರೆಯಲು ಜಿಲ್ಲಾಡಳಿತ ವಿಶೇಷ ಪಾಸ್ ವ್ಯವಸ್ಥೆ ಮಾಡಿತ್ತು. ಮಂಗಳವಾರ ರಾತ್ರಿ ಉದ್ಯಾನ್‌ರೈಲು ಮೂಲಕ ಆಗಮಿಸಿದ್ದು, ಆ ವಿದ್ಯಾರ್ಥಿನಿಯೂ ಪರೀಕ್ಷೆ ಬರೆಯಲಿದ್ದಾಳೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಹಿಳ್ಳಿ ತಿಳಿಸಿದರು.

ಹುಣಸಗಿ: ಪರೀಕ್ಷೆಗೆ ಸಕಲ ಸಿದ್ಧತೆ

ದ್ವಿತೀಯ ಪಿಯು ಇಂಗ್ಲಿಷ್ ಪರೀಕ್ಷೆ ನಡೆಸಲು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರದ ಮುಖ್ಯಸ್ಥ ಪ್ರಕಾಶ ಚೌದ್ರಿ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಪರೀಕ್ಷೆ ಗುರುವಾರ ನಡೆಯಲಿದ್ದು, ಒಂದು ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಒಟ್ಟು 17 ಬ್ಲಾಕ್‌ಗಳನ್ನು ಮಾಡಲಾಗಿದೆ. ಹುಣಸಗಿ, ಕೊಡೇಕಲ್ಲ, ನಾರಾಯಣಪುರ ಹಾಗೂ ಕಕ್ಕೇರಾ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಒಟ್ಟು 381 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಜೊತೆಗೆ ರಾಜ್ಯದ ಇತರ ಜಿಲ್ಲೆಗಳ 21 ವಿದ್ಯಾರ್ಥಿಗಳು ಈ ಹುಣಸಗಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಎದುರಿಸಲಿದ್ದಾರೆ.

ಪರೀಕ್ಷೆಗೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳಿಗೆ ಇಲಾಖೆಯ ವತಿಯಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್ ನೀಡಲಾಗುತ್ತಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT