ಯಾದಗಿರಿ: ‘ಪೋಲಿಯೊ ಮುಕ್ತ ಭಾರತಕ್ಕೆ ಎಲ್ಲರೂ ಕೈಜೋಡಿಸಿ, ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು.

ನಗರದ ಲಾಡೆಸ್ ಗಲ್ಲಿಯ ಭವಾನಿ ದೇವಸ್ಥಾನದ ಆವರಣದಲ್ಲಿ ಭಾನುವಾರ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಇರುವ ಐದು ವರ್ಷದೊಳಗಿನ 1.66 ಲಕ್ಷ ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು. ನಿಗದಿತ ಕಾರ್ಯಕ್ರಮದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರತಿಯೊಂದು ಮನೆಗೆ ತೆರಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಇರುವ ಮಕ್ಕಳನ್ನು ಗುರುತಿಸಿ, ಪೋಷಕರಿಗೆ ತಿಳಿಹೇಳಿ ಲಸಿಕೆ ಹಾಕುವ ಕೆಲಸ ಮಾಡಬೇಕು’ ಎಂದರು.

‘ಲಸಿಕೆಯ ಬಗ್ಗೆ ಜನರಲ್ಲಿ ತಪ್ಪು ತಿಳಿವಳಿಕೆ ಇದ್ದರೆ ಅದನ್ನು ಹೊಗಲಾಡಿಸಬೇಕು. ಲಸಿಕೆಯ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಸಬೇಕು. ಒಟ್ಟಾರೆಯಾಗಿ ಪೋಲಿಯೊ ಮುಕ್ತ ಭಾರತ ಮಾಡಲು ಪ್ರತಿಯೊಬ್ಬರು ಶ್ರಮಿಸಬೇಕಿದೆ’ ಎಂದು ಹೇಳಿದರು.

ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಮಾತನಾಡಿ, ‘ಇದೊಂದು ರಾಷ್ಟ್ರಿಯ ಕಾರ್ಯಕ್ರಮವಾಗಿದ್ದು, ಜನರ ಸಹಕಾರ ಅಗತ್ಯವಿದೆ. ಆರೋಗ್ಯ ಸಿಬ್ಬಂದಿ ಬಂದಾಗ ಐದು ವರ್ಷದೊಳಗಿನ ಪ್ರತಿ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಲು ಅನುವು ಮಾಡಿಕೊಡಬೇಕು’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಲವೀಶ್ ಒರಡಿಯಾ ಮಾತನಾಡಿ, ‘ಡಿಸೆಂಬರ್ 24ರವರೆಗೆ ನಡೆಯುವ ಪೋಲಿಯೊ ಲಸಿಕಾ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳು ಸಿಬ್ಬಂದಿಯೂ ಸಹಕರಿಸಬೇಕು’ ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಮಹೇಶ ಬಿರಾದಾರ ಮಾತನಾಡಿ, ‘ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯ ಮಹತ್ವದ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಗಿರಿ ಜಿಲ್ಲೆಯನ್ನು ಪೋಲಿಯೊ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸರ್ವ ರೀತಿಯಲ್ಲೂ ಪ್ರಯತ್ನ ಮಾಡಲಾಗುವುದು’ ಎಂದರು.

ಕಾರ್ಯಕ್ರಮದಲ್ಲಿ ಆರ್ಸಿಎಚ್ ಅಧಿಕಾರಿ ಡಾ. ಮಲ್ಲಪ್ಪ, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಹಣಮಂತರೆಡ್ಡಿ, ತುಳಸಿರಾಮ ಚವ್ಹಾಣ್, ಸುರೇಶ ಮಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿ ತಿಪ್ಪಣ್ಣ, ಬಿಇಒ ವೀರಪ್ಪ ಕನ್ನಳ್ಳಿ, ಸಿಡಿಪಿಒ ದೀಪಿಕಾ ಬಿ.ವಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಲಕ್ಷ್ಮಿ ಮುಂಡಾಸ್, ಜಗನಾಥ ಸೇರಿದಂತೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.