ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಮನೋಭಾವ ಅಳವಡಿಸಿಕೊಳ್ಳಿ: ಶಿಕ್ಷಣ ಇಲಾಖೆ ಅಧಿಕಾರಿ ಶ್ರೀನಿವಾಸರೆಡ್ಡಿ

Last Updated 5 ಫೆಬ್ರುವರಿ 2020, 9:28 IST
ಅಕ್ಷರ ಗಾತ್ರ

ಯಾದಗಿರಿ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಬಾಲಕ ಬಾಲಕಿಯರು ತಮ್ಮ ವಿದ್ಯಾರ್ಥಿ ಜೀವನದಲ್ಲೇ ಪೊಲೀಸರ ಕರ್ತವ್ಯ ಸೇವೆಯಂತಹ ಒಳ್ಳೆಯ ಗುಣಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀನಿವಾಸರೆಡ್ಡಿ ಹೇಳಿದರು.

ಸಾರ್ವಜನಿಕ ಇಲಾಖೆಯ ಸಭಾಭವನದಲ್ಲಿ ಜಿಲ್ಲಾ ಹಾಗೂ ಸ್ಥಳೀಯ ಸ್ಕೌಟ್ಸ್ ಸಂಸ್ಥೆಗಳ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಪುಟಾಣಿ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಟ್ರಾಫಿಕ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ ಮಾತನಾಡಿ, ಮಕ್ಕಳಿಗೆ ರಸ್ತೆ ನಿಯಮಗಳ ಅವಶ್ಯಕತೆ ವಿವರಿಸಿದರು. ಹಾಗೂ ವಿದ್ಯಾರ್ಥಿಗಳ ಕರ್ತವ್ಯಗಳನ್ನು ತಿಳಿಸಿದರು.

ಜಿಲ್ಲಾ ಸ್ಕೌಟ್ಸ್ ಕಮಿಷನರ್ ಪ್ರೊ. ಸಿ.ಎಂ.ಪಟ್ಟೇದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ರಾಜ್ಯ ಸಂಸ್ಥೆ ಮಕ್ಕಳಿಗೆ ಕರ್ತವ್ಯ ಹಾಗೂ ಸೇವಾ ಮನೋಭಾವ ಹೆಚ್ಚಿಸಲು ವಿನೂತನವಾದ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಪುಟಾಣಿಗಳೆಲ್ಲರೂ ಈ ಕಾರ್ಯಕ್ರಮದ ಬಗ್ಗೆ ತಿಳಿದುಕೊಂಡು ಶಿಸ್ತಿನ ಪೊಲೀಸ್ ಇಲಾಖೆಯಂತೆ ಮುಂಚೂಣಿಯಲ್ಲಿದ್ದು ಸಮಾಜಸೇವೆ ಮಾಡಬೇಕೆಂದು ಕಿವಿ ಮಾತು ಹೇಳಿದರು.

ಕಾರ್ಯಕ್ರಮ ಆಯೋಜಕ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಅಳ್ಳೋಳ್ಳಿ, ರಾಜ್ಯ ಪ್ರತಿನಿಧಿ ಮಲ್ಲಿಕಾರ್ಜುನ ಬಳೆ, ಜಿಲ್ಲಾ ಸಂಘಟಕಿ ನಾಗರತ್ನಾ ಪಾಟೀಲ್, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಬಸರೆಡ್ಡಿ ಮಾಲಿಪಾಟೀಲ್ ಇದ್ದರು.

ಭೇಟಿ: ಕಾರ್ಯಕ್ರಮ ನಂತರ ಮಾದರಿ ಪ್ರಾಥಮಿಕ ಶಾಲೆ ಸ್ಕೌಟರ್ ಹಣಮಯ್ಯ, ರಾಜೇಶ್ವರಿ ಶಾಲೆಯ ಗಾಲೆಪ್ಪ, ಖಂಡೇಲವಾಲ್ ಶಾಲೆ ಜೋತಿರ್ಲಿಂಗ ಹಾಗೂ ಸ್ಟೆಷನ್ ಬಜಾರ ಶಾಲೆಯ ಬಾಲಕ ಬಾಲಕಿಯರಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಕರೆದೊಯ್ದು ಕಚೇರಿ ಕಾರ್ಯ ಚಟುವಟಿಕೆಗಳ ಬಗ್ಗೆ ತಿಳಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT