ಗುರುವಾರ , ಜೂನ್ 30, 2022
21 °C

ಡಿಸಿಯಿಂದ ಕ್ವಾರಂಟೈನ್ ಕೇಂದ್ರ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಹುಣಸಗಿ ತಾಲ್ಲೂಕಿನ ರಾಜನಕೊಳ್ಳೂರು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆ ಮತ್ತು ಕೊಡೇಕಲ್ಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಕೋವಿಡ್ ಕ್ವಾರಂಟೈನ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ .ಆರ್ ಭೇಟಿ ನೀಡಿ ಪರಿಶೀಲಿಸಿದರು.

ಉಭಯ ಶಾಲೆಗಳ ಕ್ವಾರಂಟೈನ್ ಕೇಂದ್ರಗಳಲ್ಲಿ ಇರುವ ಸೋಂಕಿತರ ಯೋಗ-ಕ್ಷೇಮ ವಿಚಾರಿಸಿದ ಅವರು, ಅಡುಗೆ ತಯಾರಿಸುವ ಕೋಣೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸೋಂಕಿತರಿಗೆ ಊಟೋಪಚಾರದಲ್ಲಿ ಕೊರತೆಯಾಗಂತೆ ನೋಡಿಕೊಳ್ಳಲು ಸೂಚಿಸಿದರು. ಆರೋಗ್ಯ ದೃಷ್ಟಿಯಿಂದ ಎಲ್ಲಾ ಕೋಣೆಗಳ ಸ್ವಚ್ಛತೆಗೆ ಆದ್ಯತೆ ನೀಡಿ ಶೌಚಾಲಯ, ಕುಡಿಯುವ ನೀರು ಅಗತ್ಯ ಮೂಲಸೌಕರ್ಯಗಳ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದಕ್ಕೂ ಮುನ್ನ ತೋಟಗಾರಿಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಉಪವಿಭಾಗಾಧಿಕಾರಿ ಪ್ರಶಾಂತ ಹನಗಂಡಿ, ಹುಣಸಗಿ ತಹಶೀಲ್ದಾರ್ ಮಹಾದೇವಪ್ಪಗೌಡ ಬಿರಾದಾರ, ಉಪ ತಹಶೀಲ್ದಾರ ಬಸವರಾಜ ಬಿರಾದಾರ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.