ವಡಗೇರಾ: ತಾಲ್ಲೂಕಿನ ಕೊಂಗಂಡಿ ಗ್ರಾಮದ ಹತ್ತಿರ ವಿದ್ಯುತ್ ತಂತಿ ತಗುಲಿ ಬೊಲೆರೊ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ವಾಹನದಲ್ಲಿದ್ದ ಭತ್ತದ ಹುಲ್ಲು ಹಾಗೂ ಬೊಲೆರೊ ವಾಹನವು ಸುಟ್ಟು ಕರಕಲಾದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

‘ತಾಲ್ಲೂಕಿನ ಸೂಗೂರು ಗ್ರಾಮದಿಂದ ರಾಯಚೂರು ಜಿಲ್ಲೆಯ ಗೂಗಲ್ ಗ್ರಾಮಕ್ಕೆ ಭತ್ತದ ಹುಲ್ಲನ್ನು ತುಂಬಿಕೊಂಡು ಬೊಲೆರೊ ವಾಹನ ಕೊಂಗಂಡಿ ಗ್ರಾಮದ ಹತ್ತಿರ ಬಂದಾಗ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಕೇಂದ್ರದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿ ಕೊಂಡಿದೆ’ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

‘ವಾಹನಕ್ಕೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಗ್ರಾಮಸ್ಥರು ಜಮೀನಿನಲ್ಲಿ ಇದ್ದ ಬೋರವೆಲ್ಗಳ ಸಹಾಯದಿಂದ ಬೆಂಕಿಯನ್ನು ನಂದಿಸಿದ್ದಾರೆ. ವಾಹನ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಯಾವುದೆ ಪ್ರಾಣಹಾನಿಯಾಗಿಲ್ಲ’ ಎಂದು ತಿಳಿದು ಬಂದಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-34-1357930045

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.