ಹುಣಸಗಿ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬುಧವಾರ ಸುರಿದ ಮಳೆಗೆ ಅಲ್ಲಲ್ಲಿ ಹಿರೇಹಳ್ಳ ತುಂಬಿ ಹರಿಯುತ್ತಿದೆ.

‘ತಾಲ್ಲೂಕಿನ ಕಲ್ಲದೇವನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಸೇತುವೆ ನಿರ್ಮಾಣ ಕಾರ್ಯ ನಡೆದಿದೆ. ಆದರೆ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ತಿರುವು ರಸ್ತೆ ಹಳ್ಳದ ನೀರಿನಲ್ಲಿ ಕೊಚ್ಚಿಹೋಗಿದೆ’ ಎಂದು ಗ್ರಾಮಸ್ಥರು ತಿಳಿಸಿದರು.

ಈ ಹಿಂದೆ ಇದ್ದ ಸೇತುವೆ ತೆರವುಗೋಳಿಸಿ ಅದೇ ಸ್ಥಳದಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯ ನಡೆದಿದೆ. ಆದರೆ ಸೇತುವೆ ಪಕ್ಕದಲ್ಲಿಯೇ ಚಿಕ್ಕ ತಿರುವು ರಸ್ತೆ ನಿರ್ಮಿಸಲಾಗಿತ್ತು. ಆದರೆ ಹಳ್ಳದ ನೀರಿನ ರಭಸಕ್ಕೆ ಮಣ್ಣು ಹಾಗೂ ಪೈಪ್ಗಳು ಕೊಚ್ಚಿ ಹೋಗಿವೆ. ಅಲ್ಲದೇ ಒಂದು ಜನರೇಟರ್ ಕೂಡಾ ನೀರಿನಲ್ಲಿ ಕೊಚ್ಚಿಹೋಗಿದೆ ಎಂದು ಗ್ರಾಮದ ಸಚಿನ್ ತಿಳಿಸಿದರು.

ಗ್ರಾಮಸ್ಥರು ಗುರುವಾರ ಚನ್ನೂರು ಹಾಗೂ ಹೆಚ್ಚಾಳ ಗ್ರಾಮದ ಮುಖಾಂತರ ಗ್ರಾಮಕ್ಕೆ ತೆರಳಿದರು. ಗುರುವಾರ ಮತ್ತೆ ತಾತ್ಕಾಲಿಕ ರಸ್ತೆ ನಿರ್ಮಾಣ ಕಾರ್ಯ ನಡೆದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.