ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ವಿವಿಧೆಡೆ ಮಳೆ: ರೈತರ ಮೊಗದಲ್ಲಿ ಹರ್ಷ

Published 15 ಮೇ 2024, 5:50 IST
Last Updated 15 ಮೇ 2024, 5:50 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ವಿವಿಧೆಡೆ ಬುಧವಾರ ಬೆಳಗಿನ ಜಾವ ಉತ್ತಮ ಮಳೆಯಾಗಿದ್ದು‍, ರೈತರ ಮೊಗದಲ್ಲಿ ಹರ್ಷ ವ್ಯಕ್ತವಾಗಿದೆ.‌

ಬಿಸಿಲಿನಿಂದ ಬಸವಳಿದ ಜನತೆಗೆ ಕಳೆದ ಎರಡು ದಿನಗಳಿಂದ ಮಳೆ ಸಿಂಚನದಿಂದ ನೆಮ್ಮದಿಯ ನಿಟ್ಟಿಸಿರು ಬಿಡುವಂತೆ ಆಗಿದೆ.‌

ಎರಡು ದಿನವೂ ಮಧ್ಯರಾತ್ರಿಯಲ್ಲಿ ಮಳೆಯಾಗುತ್ತಿದ್ದು, ಮತ್ತೆ ಬೆಳಿಗ್ಗೆ ಯಥಾಸ್ಥಿತಿ ವಾತಾವರಣ ಇರುತ್ತದೆ. ಇದರಿಂದ ಮಳೆ ಬಂದರೂ ದಿನ ನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗುತ್ತಿಲ್ಲ.‌

ಕಳೆದ ವರ್ಷ ಮುಂಗಾರು, ಹಿಂಗಾರು ಮಳೆ ಕೊರತೆಯಿಂದ ಭೀಕರ ಬರ ಎದುರಾಗಿದ್ದು, ಈ ಬಾರಿ ಸುರಿಯುವ ಮಳೆಯಿಂದ ರೈತರಿಗೆ ಕೊಂಚ ನೆಮ್ಮದಿ ಸಿಕ್ಕಂತೆ ಆಗಿದೆ.‌

ಜಿಲ್ಲೆಯ ಶಹಾಪುರ, ಸುರಪುರದಲ್ಲಿ ಉತ್ತಮ ಮಳೆಯಾಗಿದ್ದು, ಯರಗೋಳ ಗ್ರಾಮದಲ್ಲಿ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಿದೆ. ಹುಣಸಗಿ, ಕೆಂಭಾವಿಯಲ್ಲಿ ಸ್ವಲ್ಪ ಮಳೆಯಾಗಿದೆ. ನಾರಾಯಣಪುರ‍, ಸೈದಾಪುರದಲ್ಲಿ ಮೋಡ ಕವಿದ ವಾತಾವರಣ ಇದೆ.

ವಡಗೇರ ತಾಲ್ಲೂಕು ವ್ಯಾಪ್ತಿಯ ಬಿರನಾಳ, ಬಬಲಾದ, ಗಡ್ಡೆಸೂಗುರ, ಹಾಲಗೇರಾದಲ್ಲಿ ಉತ್ತಮ ಮಳೆಯಾಗಿ, ಜಮೀನುಗಳಲ್ಲಿ ನೀರು ನಿಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT