ಭಾನುವಾರ, ಜೂನ್ 26, 2022
29 °C

ಯಾದಗಿರಿ: ವಿವಿಧೆಡೆ ಉತ್ತಮ ಮಳೆ, ಬಿತ್ತನೆಗೆ ಸಿದ್ಧತೆ

ಪ್ರಜಾವಾಣಿ Updated:

ಅಕ್ಷರ ಗಾತ್ರ : | |

PV Photo

ಯಾದಗಿರಿ: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ರಾತ್ರಿ ಉತ್ತಮ ಮಳೆಯಾಗಿದೆ. ತಡರಾತ್ರಿ ಸುಮಾರು ಒಂದು ಗಂಟೆ ಕಾಲ ಉತ್ತಮ ಮಳೆ ಸುರಿದಿದ್ದು, ರಾತ್ರಿ ಪೂರ್ತಿ ಜಿಟಿಜಿಟಿ ಮಳೆಯಾಗಿದೆ.

ಗುರುವಾರ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನಲ್ಲಿಯೂ
ಬುಧವಾರ ರಾತ್ರಿ 1 ಗಂಟೆ ಕಾಲ ಉತ್ತಮ ಮಳೆಯಾಗಿದೆ. ರಾತ್ರಿಯಿಡೀ ತುಂತುರು ಮಳೆ ಸುರಿದಿದೆ.

ಯರಗೋಳ ಸುತ್ತಲಿನ ಹಳ್ಳಿಗಳಲ್ಲಿ ರಾತ್ರಿ 12 ಗಂಟೆಯಿಂದ ಬೆಳಿಗ್ಗೆಯವರೆಗೆ ತುಂತುರು ಮಳೆ ಸುರಿದಿದೆ. ಸುರಪುರ, ಕಕ್ಕೇರಾದಲ್ಲಿಯೂ ಮಳೆಯಾಗಿದೆ.

ಬಿತ್ತನೆಗೆ ಸಿದ್ಧತೆ: ಜಿಲ್ಲೆಯ ವಿವಿಧ ಕಡೆ ಉತ್ತಮ ಮಳೆಯಾಗಿದ್ದರಿಂದ ರೈತರು ಬಿತ್ತನೆಗೆ ಜಮೀನು ಹದಗೊಳಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು