ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ ಜಿಲ್ಲೆಯ ವಿವಿಧೆಡೆ ಜಿಟಿ ಜಿಟಿ ಮಳೆ

Last Updated 14 ಜೂನ್ 2021, 17:17 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಸೋಮವಾರ ಅಲ್ಲಲ್ಲಿ ಜಿಟಿಜಿಟಿ ಮಳೆಯಾಗಿದೆ. ನಗರ ಸೇರಿದಂತೆ ವಿವಿಧ ಕಡೆ ಮಳೆಯಾಗಿದ್ದು, ವಾತಾವರಣ ತಂಪಿನಿಂದ ಕೂಡಿತ್ತು. ನಗರದಲ್ಲಿ ಸೋಮವಾರ ಬೆಳಿಗ್ಗೆಯಿಂದ ಆಗಾಗ ತುಂತುರು ಮಳೆಯಾಯಿತು.

ಕಳೆದ 24 ಗಂಟೆ ಅವಧಿಯಲ್ಲಿ ಜಿಲ್ಲೆಯ ವಿವಿಧೆಡೆ ಸಾಧಾರಣ ಮಳೆಯಾಗಿದೆ. ಸುರಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಹುಣಸಗಿಯಲ್ಲಿ ಕಡಿಮೆ ಮಳೆಯಾಗಿದೆ.

ಎಂಎಂ ಮಳೆ ವಿವರ:

ಶಹಾಪುರ ತಾಲ್ಲೂಕಿನಲ್ಲಿ 1.1 ಎಂಎಂ, ಸುರಪುರ ತಾಲ್ಲೂಕಿನಲ್ಲಿ 9.8, ಯಾದಗಿರಿ ತಾಲ್ಲೂಕಿನಲ್ಲಿ 9, ಗುರುಮಠಕಲ್ ತಾಲ್ಲೂಕಿನಲ್ಲಿ 6.6, ವಡಗೇರಾ ತಾಲ್ಲೂಕಿನಲ್ಲಿ 3.8, ಹುಣಸಗಿ ತಾಲ್ಲೂಕಿನಲ್ಲಿ 1.7 ಎಂಎಂ ಮಳೆಯಾಗಿದೆ.

ಕೃಷಿ ಚಟುವಟಿಕೆ ಚುರುಕು:

ಗ್ರಾಮೀಣ ಭಾಗದಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿದ್ದು, ಬಿತ್ತನೆ ಕಾರ್ಯ ಸಾಗಿದೆ. ಬೀಜ, ರಸಗೊಬ್ಬರ ಖರೀದಿಯಲ್ಲಿ ರೈತರು ತೊಡಗಿಸಿಕೊಂಡಿದ್ದಾರೆ. ಮುಂಗಾರು ಆಶಾದಾಯಕವಾಗಿದ್ದು, ಜಿಲ್ಲೆಯಲ್ಲಿ 3.92 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಹೊಂದಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT