ಶುಕ್ರವಾರ, ಅಕ್ಟೋಬರ್ 2, 2020
20 °C

ಕೋವಿಡ್-19 ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ: ಡಿಸಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಬಗ್ಗೆ ಜನರಿಗೆ ಜಾಗೃತಿ ಮೂಡಿಸಿ ಪರೀಕ್ಷೆ ಮಾಡಿ ತಕ್ಷಣದಲ್ಲಿಯೇ ವರದಿ ನೀಡಿ ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಅಧಿಕಾರಿಗಳಿಗೆ ಮತ್ತು ವೈದ್ಯರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು.

ಸಮುದಾಯದಲ್ಲಿ ಕೊರೊನಾ ಕುರಿತು ಭಯ ಉಲ್ಬಣವಾಗಿದೆ. ಜನರಿಗೆ ಅರಿವು ಮೂಡಿಸುವ ಕೆಲಸ ಅಗತ್ಯವಾಗಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅರಿವು ಮೂಡಿಸಬೇಕಾಗಿದೆ ಎಂದು ತಿಳಿಸಿದರು.

ಸಮುದಾಯದಲ್ಲಿ ಹೆಚ್ಚಾಗಿ ಸಂಪರ್ಕ ಪ್ರಕರಣಗಳು ಪತ್ತೆಯಾಗುತ್ತಿದ್ದು, ಮಾಸ್ಕ್ ಮತ್ತು ಸ್ಯಾನಿಟೈಸರ್ ಕಡ್ಡಾಯವಾಗಿ ಉಪಯೋಗಿಸುವಂತೆ ಹೇಳಬೇಕು. ಗ್ರಾಮಗಳಲ್ಲಿನ ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂಸೇವಕರ ಸಹಾಯ ಪಡೆದುಕೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್-19 ಕೇಂದ್ರಗಳಲ್ಲಿನ ಎಲ್ಲಾ ತಾಲ್ಲೂಕುಗಳ ಕೇಂದ್ರಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಎಂಎಸ್ ಪಾಟೀಲ, ಡಾ.ವೀರಬಸಂತರೆಡ್ಡಿ ಮುದ್ನಾಳ, ಡಾ.ಶರಣಭೂಪಾಲರೆಡ್ಡಿ, ಡಾ.ವೀರೇಶ ಜಾಕಾ ಸೇರಿದಂತೆ ಖಾಸಗಿ ವೈದ್ಯರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು