ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ರೈತ ವಿದ್ಯಾನಿಧಿ: ಪ್ರಮಾಣ ಪತ್ರ ಸಲ್ಲಿಕೆಗೆ 29 ಕೊನೇ ದಿನ

Published 26 ಫೆಬ್ರುವರಿ 2024, 14:17 IST
Last Updated 26 ಫೆಬ್ರುವರಿ 2024, 14:17 IST
ಅಕ್ಷರ ಗಾತ್ರ

ಯಾದಗಿರಿ: 2023-24ನೇ ಸಾಲಿನಲ್ಲಿ ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿವೇತನ ಪಡೆಯುತ್ತಿರುವವರು ‘ಮುಖ್ಯಮಂತ್ರಿ ರೈತ ವಿದ್ಯಾನಿಧಿ’ ಹಾಗೂ ‘ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ’ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಲ್ಲ ಎಂದು ಜಂಟಿ ಕೃಷಿ ನಿರ್ದೇಶಕ ತಿಳಿಸಿದ್ದಾರೆ.

ಅಲ್ಲದೇ, ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ₹2.5 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಆದಾಯ ಪ್ರಮಾಣಪತ್ರ ಸಲ್ಲಿಸಲು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ (ಎಸ್‍ಎಸ್‍ಪಿ) ವಿದ್ಯಾರ್ಥಿಗಳ ಲಾಗಿನ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ. ಫೆ.29ರೊಳಗೆ ಜಾತಿ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡುವುದು ಕಡ್ಡಾಯವಾಗಿದೆ ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT