ಸೋಮವಾರ, ಸೆಪ್ಟೆಂಬರ್ 20, 2021
27 °C

ಕೋವಿಡ್‌ಗೆ ಲಸಿಕೆ ರಾಮಬಾಣ: ಮುರುಘರಾಜೇಂದ್ರ ಸ್ವಾಮೀಜಿ ಅಭಿ‍ಪ್ರಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುರುಮಠಕಲ್: ‘ಕೋವಿಡ್ ಜಗತ್ತಿನಾದ್ಯಂತ ಆವ ರಿಸಿ ಜನ ರನ್ನು ಸಂಕಷ್ಟಕ್ಕೆ ದೂಡಿದೆ. ಸೋಂಕು ಜಯಿಸಲು ಲಸಿಕೆ ರಾಮಬಾಣವಾಗಿದ್ದು, ಎಲ್ಲರೂ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳ ಬೇಕು’ ಎಂದು ಖಾಸಾಮಠದ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಪಟ್ಟಣದ ಖಾಸಾಮಠದಲ್ಲಿ ಗುರುವಾರ ಲಸಿಕೆ ಪಡೆದ ಮಾತನಾಡಿದ ಅವರು, ‘ನಾನು ಎರಡು ಡೋಸ್‌ ಲಸಿಕೆ ಪಡೆದಿದ್ದೇನೆ. ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ. ಅದರ ಬಗೆಗಿನ ತಪ್ಪು ಮಾಹಿತಿಗೆ ಯಾರೂ ಕಿವಿಗೊಡಬಾರದು ಎಂದರು.

ಭಾರತದಲ್ಲಿ ಅಭಿವೃದ್ಧಿ ಪಡಿಸಿರುವ ಲಸಿಕೆಗಳು ಹೆಚ್ಚು ಪರಿಣಾಮಕಾರಿ ಎಂಬುವುದು ದೃಢವಾಗಿದೆ. ಈಗ ಉಚಿತ ಲಸಿಕೆ ಹಾಕಲಾಗುತ್ತಿದೆ, ಇದು ಎಲ್ಲರಿಗೂ ಅನುಕೂಲವಾಗಿದೆ. ಗ್ರಾಮೀಣ ಪ್ರದೇಶಗಳ ಜನರು ಲಸಿಕೆ ಪಡೆಯಲು ಮುಂದೆ ಬರಬೇಕು ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.