ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ | ರಂಜಾನ್‌; ಲಾಕ್‍ಡೌನ್ ಪಾಲಿಸಿ

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶಾಂತಿಪಾಲನೆ ಪೂರ್ವಭಾವಿ ಸಭೆ
Last Updated 25 ಏಪ್ರಿಲ್ 2020, 16:46 IST
ಅಕ್ಷರ ಗಾತ್ರ

ಯಾದಗಿರಿ: ರಾಜ್ಯದಲ್ಲಿ ಕೋವಿಡ್-19 ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ರಂಜಾನ್ ಮಾಸದಲ್ಲಿ ಮುಸ್ಲಿಮರು ಮನೆಯಲ್ಲಿಯೇ ಪ್ರಾರ್ಥನೆ ಮಾಡುವ ಮೂಲಕ ಲಾಕ್‍ಡೌನ್ ಆದೇಶ ಪಾಲಿಸುವಂತೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಂಜಾನ್ ಹಬ್ಬದ ಶಾಂತಿಪಾಲನೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ವಕ್ಫ್‌ ಮಂಡಳಿಯು ರಂಜಾನ್ ಮಾಸದಲ್ಲಿ ಮೇ 3ರವರೆಗೆ ರಂಜಾನ್ ಸಂಬಂಧ ಮಸೀದಿ ಹಾಗೂ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಸಮಾಜದವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಮೇ 3ರ ನಂತರ ಹೊರಡಿಸುವ ಆದೇಶಗಳನ್ನು ಕೂಡ ಪಾಲಿಸುವುದು ಕಡ್ಡಾಯ ಎಂದು ತಿಳಿಸಿದರು.

ದಾವತ್-ಎ-ಸಹೆರಿ ಅಥವಾ ಇಫ್ತಾರಿಗೆ ಸಂಬಂಧಿಸಿದಂತೆ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿ ಸತಕ್ಕದ್ದಲ್ಲ. ಮಸೀದಿ ಆವರಣದಲ್ಲಿ ಗಂಜಿ, ಆಶ್ ಅಥವಾ ಜ್ಯೂಸ್‍ಗಳನ್ನು ತಯಾರಿಸುವುದನ್ನು ನಿಷೇಧಿಸಲಾಗಿದೆ. ಮಸೀದಿ ಅಥವಾ ದರ್ಗಾದ ಹತ್ತಿರ ಯಾವುದೇ ಉಪಾಹಾರ ಗೃಹ ಗಳನ್ನು ತೆರೆಯಬಾರದು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಮಾತನಾಡಿ, ಶಾಂತಿಯುತವಾಗಿ ಹಬ್ಬ ಆಚರಣೆ ಮಾಡುವಂತೆ ಕೋರಿದರು.

ಸಹಾಯಕ ಆಯುಕ್ತ ಶಂಕರಗೌಡ ಎಸ್.ಸೋಮನಾಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸಂತ ಚವ್ಹಾಣ, ನಗರಸಭೆ ಪೌರಾಯುಕ್ತ ರಮೇಶ ಸುಣಗಾರ, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ಬೈತುಲ್ ಮಹಲ್ ಅಧ್ಯಕ್ಷ ಲಾಯಕ್ ಹುಸೇನ್ ಬಾದಲ್, ಪ್ರಧಾನ ಕಾರ್ಯದರ್ಶಿ ಗುಲಾಮ್ ಸಮದಾನಿ ಮೂಸಾ, ವಕ್ಫ್ ಬೋರ್ಡ್ ಅಧ್ಯಕ್ಷ ಗುಲಾಮ್ ಜಿಲಾನಿ, ಇನಾಯತ್ ಉರ್ ರೆಹಮಾನ್, ಮಹ್ಮದ್ ಮಿಯಾದ್ ಅಹ್ಮದ್, ಜಹೀರುದ್ದೀನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT