ಗುರುವಾರ , ಸೆಪ್ಟೆಂಬರ್ 23, 2021
20 °C

ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ; ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಮದುವೆ ಆಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಹಣಮಂತ ಸಾಯಿಬಣ್ಣಗೆ ಪೊಲೀಸರು ಬಂಧಿಸಿದ್ದಾರೆ. 

‘ವಡಗೇರಾ ತಾಲ್ಲೂಕಿನ ಗುರುಸಣಗಿ ಗ್ರಾಮದ ಆರೋಪಿ ಹಣಮಂತ, ಸಂತ್ರಸ್ತೆ ಯುವತಿಯ ತಾಯಿಯ ತಮ್ಮ.ಮದುವೆ ಆಗುವುದಾಗಿ ನಂಬಿಸಿ ಹಲವು ಬಾರಿ ಅತ್ಯಾಚ್ಯಾರ ಎಸಗಿದ್ದ. ಬಳಿಕ ಬೇರೆ ಯುವತಿಯ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು ಯುವತಿಯ ಗಮನಕ್ಕೆ ಬಂದು ಈ ಬಗ್ಗೆ ಪ್ರಶ್ನಿಸಿದಾಗ, ಮದುವೆ ಆಗಲು ನಿರಾಕರಿಸಿದ. ಇದರಿಂದ ಆತಂಕಗೊಂಡ ಯುವತಿಯು ಆತನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿಯನ್ನು ಬಂಧಿಸಿ, ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ಮಹಿಳಾ ಪೊಲೀಸ್‌ ಠಾಣೆಯ ಸಿಪಿಐ ರಾಘವೇಂದ್ರ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು