ಬುಧವಾರ, ಜುಲೈ 6, 2022
21 °C

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಚಿತ್ರೀಕರಣ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ನಗರ ಹೊರವಲಯದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ವಿಡಿಯೊ ಚಿತ್ರೀಕರಣ ಮಾಡಿದ್ದ ಆರೋಪಿಗಳನ್ನು ಇಲ್ಲಿನ ಮಹಿಳಾ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಗ್ರಾಮವೊಂದರ ಆಟೊ ಚಾಲಕ ಹನುಮಂತ ಮಲ್ಲಯ್ಯ ಜಿನಕೇರಿ, ಆತನ ಸ್ನೇಹಿತ ನರಸಪ್ಪ ಮಹದೇವಪ್ಪ ಬಂಧಿತರು.

‌‘ಏ.26ರಂದು ಮಹಿಳೆ ಆಟೊದಲ್ಲಿ ಯಾದಗಿರಿಗೆ ಕೆಲಸಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಆಟೊ ಚಾಲಕ ಹನುಮಂತ ತನ್ನ ಸ್ನೇಹಿತ ನರಸಪ್ಪನನ್ನು ಜತೆಗೆ ಕರೆದುಕೊಂಡು ಬಂದಿದ್ದ. ನಗರ ಹೊರವಲಯದ ನಿರ್ಜನ ಪ್ರದೇಶದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದ. ಇದನ್ನು ನರಸಪ್ಪ ಚಿತ್ರೀಕರಣ ಮಾಡಿದ್ದಾನೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

‘ಆರೋಪಿಗಳು ಜೀವ ಬೆದರಿಕೆ ಹಾಕಿದ್ದರು. ಹೀಗಾಗಿ ಯಾರಿಗೂ ಹೇಳದೇ ಮನೆಯಲ್ಲಿದ್ದೆ. ಚಿಕ್ಕಪ್ಪ ಮತ್ತು ಚಿಕ್ಕಮ್ಮ ನನಗೆ ಧೈರ್ಯ ಹೇಳಿದ್ದರಿಂದ ಏ.27ರಂದು ದೂರು ನೀಡಿದ್ದೇನೆ ಎಂದು ಸಂತ್ರಸ್ತ ಮಹಿಳೆ ಹೇಳಿದ್ದಾರೆ’ ಎಂದು ಎಸ್ಪಿ ತಿಳಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು