ಬುಧವಾರ, ಆಗಸ್ಟ್ 10, 2022
25 °C

ಸೋದರ ಮಾವನಿಂದ ಬಾಲಕಿ ಮೇಲೆ ಅತ್ಯಾಚಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ತಾಲ್ಲೂಕಿನ ಗ್ರಾಮವೊಂದರ 13 ವರ್ಷದ ಬಾಲಕಿ ಮೇಲೆ ಆಕೆಯ ಸೋದರ ಮಾವ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ. ಮಲ್ಲಿಕಾರ್ಜುನ ನಗಲಾಪುರ ಎಂಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಲ್ಲಿಕಾರ್ಜುನ ನಗಲಾಪುರ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಬಾಲಕಿಯ ತಂದೆ 8 ವರ್ಷದ ಹಿಂದೆ ಮೃತಪಟ್ಟಿದ್ದಾರೆ. ತಾಯಿ ಮತ್ತು ಐವರು ಮಕ್ಕಳು ಬೆಂಗಳೂರಿನಲ್ಲಿ ಇದ್ದಾರೆ. ಅತ್ಯಾಚಾರದಿಂದ ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದು, ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬಾಲಕಿ ಬೆಂಗಳೂರಿನ ಶಾಲೆಯಲ್ಲಿ ಓದುತ್ತಿದ್ದು, ಆಗಾಗ ಹಬ್ಬ, ಜಾತ್ರೆ, ಸಮಾರಂಭಗಳಿಗೆ ಊರಿಗೆ ಬಂದು ಹೋಗುತ್ತಿದ್ದರು. ಇದನ್ನು ಸಲಿಗೆಯಾಗಿ ತೆಗೆದುಕೊಂಡ ಆರೋಪಿಯು ಆಕೆ ಇಲ್ಲಿ ಬಂದಾಗ, ಅತ್ಯಾಚಾರವೆಸಗಿದ್ದಾನೆ ಎಂದು ತಾಯಿ, ಮಗಳು ದೂರು ನೀಡಿದ್ದಾರೆ.   ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಮಹಿಳಾ ಠಾಣೆ ಪೊಲೀಸ್‌ ಇನ್ಸ್‌ಪೆಕ್ಟರ್‌ನಿಂದ ತನಿಖೆ ನಡೆಸಲಾಗುತ್ತಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು