ಹುಣಸಗಿ:ಕಳೆದ ವಾರ ತಾಲ್ಲೂಕಿನಲ್ಲಿ ನಡೆದಿದ್ದ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಭಾನುವಾರ ಬಂಧಿಸಿದ್ದಾರೆ.

ಎರಡನೇ ಆರೋಪಿ ಬಸನಗೌಡ ಪಾಟೀಲ ಎಂಬುವನನ್ನು ಶನಿವಾರ ಬಂಧಿಸಿದ್ದರೆ, ಮತ್ತೋರ್ವ ಆರೋಪಿ ಶಿವಕುಮಾರ ಎಂಬುವನನ್ನು ಭಾನುವಾರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹುಣಸಗಿ ಸಿಪಿಐ ದೌಲತ್ ಎನ್.ಕೆ. ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂವರ ವಿರುದ್ಧ ಅಪ್ರಾಪ್ತೆಯ ತಂದೆ ಪೊಕ್ಸೊ ಕಾಯ್ದೆಯಡಿ ಮೇ 8ರಂದು ಹುಣಸಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಅತ್ಯಾಚಾರ ಆರೋಪಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ ವಿವಿಧ ಸಂಘಟನೆಗಳ ಮುಖಂಡರು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ರಾಜ್ಯದ ವಿವಿಧೆಡೆ ಮನವಿ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.