ಭಾನುವಾರ, ಡಿಸೆಂಬರ್ 15, 2019
23 °C

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಜಿಲ್ಲೆಯಾದ್ಯಂತ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಎಲ್ಲಾ ಸದಸ್ಯರು ತಮ್ಮ ನ್ಯಾಯಬೆಲೆ ಅಂಗಡಿಗಳಿಗೆ ಹಾಜರಾಗಿ ಕಡ್ಡಾಯವಾಗಿ ಆಧಾರ್ ದೃಢೀಕರಣ (ಇ-ಕೆವೈಸಿ)ವನ್ನು ಮಾಡಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.

ಇ-ಕೆವೈಸಿ ಸಂಗ್ರಹಣಾ ಕಾರ್ಯವನ್ನು ತಿಂಗಳ ಮೊದಲ ಹತ್ತು ದಿನಗಳ ಅಂದರೆ ಡಿಸೆಂಬರ್ 1ರಿಂದ 10ರವರೆಗೆ ಮತ್ತು 2020ರ ಜನವರಿ 1ರಿಂದ ಜ.10ರ ವರೆಗೆ ಮಾಡಲಾಗುತ್ತದೆ. ಈ ಹತ್ತು ದಿನಗಳಲ್ಲಿ ಆನ್‍ಲೈನ್ ಮೂಲಕ ಪಡಿತರ ವಿತರಣೆ ಇರುವುದಿಲ್ಲ. ಇ-ಕೆವೈಸಿ ಮಾಡದೆ ಇರುವ ಫಲಾನುಭವಿಗಳಿಗೆ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲು ಕ್ರಮ ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಜಾತಿ ಪ್ರಮಾಣಪತ್ರ ಸಲ್ಲಿಸಿ:

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪಡಿತರ ಚೀಟಿಯ ಫಲಾನುಭವಿಗಳು ತಮ್ಮ ಪಡಿತರ ಚೀಟಿಯ ಯಾವುದಾದರೂ ಒಬ್ಬ ಸದಸ್ಯರ ಜಾತಿ ಪ್ರಮಾಣ ಪತ್ರವನ್ನು ಇ-ಕೆವೈಸಿ ಮಾಡುವ ಸಂದರ್ಭದಲ್ಲಿ ಮಾಹಿತಿ ನೀಡಬೇಕು. ಅನಿಲ ಸಂಪರ್ಕ ಹೊಂದಿದರೆ, ಅಂತಹ ಪಡಿತರ ಚೀಟಿದಾರರ ಯಾವ ಯೋಜನೆಯ ಫಲಾನುಭವಿಗಳು ಅಥವಾ ನೇರವಾಗಿ ಖರೀದಿ ಮಾಡಿರುವ ಕುರಿತು ಮಾಹಿತಿ ನೀಡಲು ಸೂಚಿಸಲಾಗಿದೆ.

ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿ ಫಲಾನುಭವಿಯ ಇ-ಕೆವೈಸಿ ಮಾಡುವ ಸಲುವಾಗಿ ಪ್ರತಿ ಫಲಾನುಭವಿಗೆ 5 ರೂ.ನಂತೆ ಒಂದು ಕುಟುಂಬಕ್ಕೆ ಗರಿಷ್ಠ ಮೊತ್ತ ₹20 ಮಾತ್ರ ಇಲಾಖೆ ವತಿಯಿಂದ ನೇರವಾಗಿ ಅಂಗಡಿಯವರಿಗೆ ಪಾವತಿಸಲಾಗುತ್ತದೆ. ಫಲಾನುಭವಿಯಿಂದ ಯಾವುದೇ ಮೊತ್ತವನ್ನು ನ್ಯಾಯಬೆಲೆ ಅಂಗಡಿಯವರು ಸಂಗ್ರಹಿಸಿದಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಒಂದು ವೇಳೆ ಪಡಿತರ ಚೀಟಿದಾರರಿಂದ ಹಣ ಪಡೆದ ಬಗ್ಗೆ ದೂರುಗಳು ಬಂದರೆ ಅಂತಹ ನ್ಯಾಯಬೆಲೆ ಅಂಗಡಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಪಡಿತರ ಚೀಟಿದಾರರ ಆಧಾರ್ ದೃಢೀಕರಣ (ಇ-ಕೆವೈಸಿ)ವನ್ನು ಪಡೆಯುವ ಸಂದರ್ಭದಲ್ಲಿ ಯಾವುದಾದರು ಸಮಸ್ಯೆಗಳು ಮತ್ತು ದೂರುಗಳು ಇದ್ದರೆ ದೂರವಾಣಿ ಸಂಖ್ಯೆ:08473-253707 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)