ಮಂಗಳವಾರ, ಫೆಬ್ರವರಿ 25, 2020
19 °C
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ

‘ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರಲು ಪೂರಕವಾಗುತ್ತವೆ. ಈ ದಿಸೆಯಲ್ಲಿ ಶಾಲಾ ಶಿಕ್ಷಕರು ಆಸಕ್ತಿ ವಹಿಸಿ, ಮಕ್ಕಳ ಪ್ರತಿಭೆಯನ್ನು ಗುರುತಿಸುವ ಮೂಲಕ ಪ್ರೋತ್ಸಾಹಿಸಬೇಕು ಎಂದು ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಹೇಳಿದರು.

ನಗರದ ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ 2019-20ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಂದು ಮಗುವಿನಲ್ಲಿ ಪ್ರತಿಭೆ ಇರುತ್ತದೆ. ಆದರೆ, ಅದನ್ನು ಅನಾವರಣ ಮಾಡುವ ಸೂಕ್ತ ವೇದಿಕೆ ಹಾಗೂ ವ್ಯಕ್ತಪಡಿಸುವ ಕಲೆ ಗೊತ್ತಿರುವುದಿಲ್ಲ. ಹಾಗಾಗಿ ಸರ್ಕಾರವು ಮಕ್ಕಳ ಪ್ರತಿಭೆ ಅನಾವರಣಕ್ಕೆ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವದಂತಹ ಕಾರ್ಯಕ್ರಮ ಆಯೋಜಿಸಿದೆ. ಇದರ ಸದುಪಯೋಗವನ್ನು ಪ್ರತಿ ಮಕ್ಕಳು ಪಡೆದುಕೊಳ್ಳಬೇಕು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ಪ್ರದರ್ಶಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಜಶೇಖರಗೌಡ ಪಾಟೀಲ ವಜ್ಜಲ್, ಜಿಲ್ಲಾ ಪಂಚಾಯಿತಿ ಸದಸ್ಯ ಶಿವಲಿಂಗಪ್ಪ ಪುಟಗಿ, ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಭಾರಿ ಉಪನಿರ್ದೇಶಕ ಡಿ.ಎಂ.ಹೊಸಮನಿ, ಡಯಟ್ ಪ್ರಾಂಶುಪಾಲರಾದ ಶೀಬಾ, ಡಾನ್ ಬಾಸ್ಕೋ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಫಾದರ್ ಅಂಟೋನಿ ಫ್ರಾನ್ಸಿಸ್, ಎಸ್ಸೆಸ್ಸೆಲ್ಸಿ ಪರೀಕ್ಷೆ ನೋಡಲ್ ಅಧಿಕಾರಿ ಡಾ.ಮಲ್ಲಪ್ಪ ಯರಗೋಳ, ನಿಂಗಪ್ಪ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಮಹಿಪಾಲರೆಡ್ಡಿ, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮೋನಯ್ಯ ಇದ್ದರು.

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಸರ್ವಜ್ಞ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮಂಜುನಾಥ ಮೋಹನ್ ರಾಠೋಡ್ ಬೆಳಗೇರಾ ಅವರನ್ನು ಈ ವೇಳೆ ಸನ್ಮಾನಿಸಲಾಯಿತು. ದೇವಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೀತಿ ಹಾಗೂ ಸಂಗಡಿಗರು, ಥಾನುನಾಯಕ ತಾಂಡಾದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನಂದಿನಿ ಹಾಗೂ ಸಂಗಡಿಗರ ಜಾನಪದ ನೃತ್ಯ ಗಮನ ಸೆಳೆದವು.

ಗುರುಮಠಕಲ್‍ನ ಮಲ್ಲಯ್ಯಕಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥನಾ ಗೀತೆ ಹಾಡಿದರು. ಕಾರ್ಯಕ್ರಮದ ನೋಡಲ್ ಅಧಿಕಾರಿ ವೀರಪ್ಪ ಕನ್ನಳ್ಳಿ ಸ್ವಾಗತಿಸಿದರು. ಯರಗೋಳ ಶಾಲಾ ಶಿಕ್ಷಕ ಉಮೇಶ್ ನಿರೂಪಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು